ಚೆನ್ನೈ: ಓ.ಪನ್ನೀರ್ ಸೆಲ್ವಂ ಮತ್ತು ಕೆ.ಪಳನಿಸ್ವಾಮಿ ನಿರ್ವಹಿಸುತ್ತಿರುವಎಐಎಡಿಎಂಕೆ ಪಕ್ಷದ ಸಂಯೋಜಕ ಮತ್ತು ಜಂಟಿ ಸಂಯೋಜಕ ಹುದ್ದೆಗಳಿಗೆ ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದೆ.
ಪಕ್ಷದ ಬೈಲಾ ತಿದ್ದುಪಡಿ ಮಾಡಿದ ಮರುದಿನವೇ ಈ ಹುದ್ದೆಗಳಿಗೆ ಚುನಾವಣೆ ಘೋಷಿಸಲಾಗಿದೆ. ತಮಿಳುನಾಡಿನ ಪ್ರಮುಖ ವಿರೋಧ ಪಕ್ಷವಾಗಿರುವ ಎಐಎಡಿಎಂಕೆ, ಸ್ಥಳೀಯ ಮಟ್ಟದ ವಿವಿಧ ಪದಾಧಿಕಾರಿಗಳ ಸ್ಥಾನಗಳಿಗೆ ಇದೇ ತಿಂಗಳಿನಲ್ಲಿ ಚುನಾವಣೆ ನಡೆಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಐದು ವರ್ಷಗಳಿಗೊಮ್ಮೆ ಚುನಾವಣೆ ಕಡ್ಡಾಯಗೊಳಿಸಿರುವ ಪಕ್ಷದ ಕಾನೂನುಗಳಿಗೆ ಅನುಗುಣವಾಗಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.