ಚೆನ್ನೈ: ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿ ಮುಂದುವರಿಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಇದಕ್ಕೆ ವಿರುದ್ಧವಾದ ಹೇಳಿಕೆ ನೀಡಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು, ತಮ್ಮ ಪಕ್ಷವು ಸ್ವಂತ ಬಲದಿಂದ ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.
2026ರಲ್ಲಿ ಚುನಾವಣೆಯಲ್ಲಿ ಗೆದ್ದು ಎನ್‌ಡಿಎ ಸರ್ಕಾರ ರಚಿಸುವ ಮುನ್ಸೂಚನೆ ನೀಡಿದ್ದ ತಮಿಳುನಾಡಿನ ವಿರೋಧಪಕ್ಷ ಎಐಎಡಿಎಂಕೆ ಮತ್ತು ಅದರ ಮಿತ್ರಪಕ್ಷ ಬಿಜೆಪಿ ನಡುವೆ ಅಪಸ್ವರ ಎದ್ದಿರುವುದು ಚರ್ಚೆಗೆ ಗ್ರಾಸವಾಗಿದೆ.
ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿದ ಅಮಿತ್ ಶಾ ಅವರು, ‘ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟವು ಭರ್ಜರಿ ಜಯವನ್ನು ಗಳಿಸಲಿದೆ. ಬಿಜೆಪಿಯು ಸರ್ಕಾರದ ಭಾಗವಾಗಿರಲಿದೆ’ ಎಂದು ಹೇಳಿದರು.
ಶಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪಳನಿಸ್ವಾಮಿ, ‘ಈ ಹಿಂದೆ ಹೇಳಿದಂತೆ ಎಐಡಿಎಂಕೆ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.