ಚಿತ್ರಕೃಪೆ: @EPSTamilNadu
ಚೆನ್ನೈ: ಇತ್ತೀಚೆಗೆ ಘಿಬಿಲಿ ಟ್ರೆಂಡ್ ಹೆಚ್ಚಾಗಿದ್ದು, ಇದಕ್ಕೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿಯೂ ಹೊರತಾಗಿಲ್ಲ. ಇಂದು (ಸೋಮವಾರ) ಪಳನಿಸ್ವಾಮಿ ಆ್ಯನಿಮೇಟೆಡ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಆ್ಯನಿಮೇಟೆಡ್ ಚಿತ್ರಗಳನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ನನ್ನ ಕೆಲವು ಸ್ಮರಣೀಯ ಕ್ಷಣಗಳನ್ನು ಅನಿಮೇಟೆಡ್ ಚಿತ್ರಗಳಾಗಿ ಬದಲಾಯಿಸಿಕೊಂಡಿದ್ದು, ಉತ್ತಮವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಪಳನಿಸ್ವಾಮಿ, ರೈತರು ಮತ್ತು ಕೃಷಿ ಕಾರ್ಮಿಕರೊಂದಿಗೆ ಇರುವ ಆ್ಯನಿಮೇಟೆಡ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಸ್ಟುಡಿಯೋ ಘಿಬಿಲಿ ಎಂಬುವುದು ಓಪನ್‌ಎಐ ಅಭಿವೃದ್ಧಿಪಡಿಸಿದ ಜನಪ್ರಿಯ ಎಐ ಚಾಟ್‌ಬಾಟ್ ಚಾಟ್‌ಜಿಪಿಟಿ ಆಗಿದೆ. ಪ್ರಧಾನಿ ನರೇಂದ್ರ ಮೋದಿ, ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಮತ್ತು ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಸೇರಿದಂತೆ ಅನೇಕರ ಆ್ಯನಿಮೇಟೆಡ್ ಚಿತ್ರಗಳು ಗಮನ ಸೆಳೆದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.