ADVERTISEMENT

ರಾಷ್ಟ್ರಪತಿ ಚುನಾವಣೆ ಕುರಿತು ಭಾನುವಾರ ಎಐಎಡಿಎಂಕೆ ಶಾಸಕರ ಸಭೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2022, 13:40 IST
Last Updated 16 ಜುಲೈ 2022, 13:40 IST
ಎಡಪ್ಪಾಡಿ ಕೆ.ಪಳನಿಸ್ವಾಮಿ
ಎಡಪ್ಪಾಡಿ ಕೆ.ಪಳನಿಸ್ವಾಮಿ   

ಚೆನ್ನೈ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯ ಕುರಿತು ಪಕ್ಷದ ಶಾಸಕರ ಜೊತೆಗೆ ಚರ್ಚಿಸಲು ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕ ಹಾಗೂ ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರು ಜುಲೈ 17ರಂದು ಸಭೆ ಕರೆದಿದ್ದಾರೆ.

ಈಚೆಗೆ ಪಕ್ಷದಿಂದ ಉಚ್ಚಾಟನೆಯಾಗಿರುವ ಶಾಸಕಾಂಗ ಪಕ್ಷದ ಉಪನಾಯಕ ಒ.ಪನ್ನೀರಸೆಲ್ವಂ ಅವರ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡುವ ಕುರಿತೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪಕ್ಷದ ಪ್ರಧಾನ ಕಚೇರಿಗೆ ಬೀಗ ಹಾಕಿರುವ ಕಾರಣ ಚೆನ್ನೈನ ಪಂಚತಾರಾ ಹೋಟೆಲ್‌ನಲ್ಲಿ ಸಭೆ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಮತಗಟ್ಟೆ ಪ್ರತಿನಿಧಿ ಹಾಗೂ ಬಿಜೆಪಿ ಶಾಸಕಿ ವನತಿ ಶ್ರೀನಿವಾಸನ್‌ ಅವರು ಶಾಸಕರಿಗೆ ಮತದಾನ ಪ್ರಕ್ರಿಯೆ ಕುರಿತು ವಿವರಿಸುವರು ಎಂದು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.