ADVERTISEMENT

ಕೆಪಿಸಿಸಿಗೆ ರಾಜಕೀಯ ವಿದ್ಯಮಾನಗಳ ಸಮಿತಿ ರಚಿಸಿದ ಎಐಸಿಸಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2022, 15:24 IST
Last Updated 9 ಜುಲೈ 2022, 15:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಲುವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯಲ್ಲಿ (ಕೆಪಿಸಿಸಿ) ರಾಜಕೀಯ ವಿದ್ಯಮಾನಗಳ ಸಮಿತಿಯನ್ನು ಎಐಸಿಸಿ ಶನಿವಾರ ರಚಿಸಿದೆ.

ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಮಿತಿಗೆ ಸಂಚಾಲಕರಾಗಿರುವರು. ಸಮಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌, ಹಿರಿಯ ಮುಖಂಡ ಕೆ.ಎಚ್‌.ಮುನಿಯಪ್ಪ, ಶಾಸಕ ದಿನೇಶ್‌ ಗುಂಡೂರಾವ್‌, ಹಿರಿಯ ಮುಖಂಡ ಎಂ.ವೀರಪ್ಪ ಮೊಯಿಲಿ, ಮಾರ್ಗರೇಟ್‌ ಆಳ್ವ, ಶಾಸಕ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ, ಸಲೀಂ ಅಹ್ಮದ್‌, ಆರ್‌.ಧ್ರುವನಾರಾಯಣ, ಸಂಸದ ಡಿ.ಕೆ. ಸುರೇಶ್, ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್‌, ಶಾಸಕರಾದ ಕೆ.ಆರ್.ರಮೇಶ್‌ ಕುಮಾರ್, ಕೆ.ಜೆ.ಜಾರ್ಜ್‌, ಪಕ್ಷದ ರಾಷ್ಟ್ರೀಯ ಕಾರ್ಯಪಡೆಯ ಸದಸ್ಯ ಸುನಿಲ್‌ ಕನಗೋಳ್‌, ಶಾಸಕ ಕೃಷ್ಣ ಬೈರೇಗೌಡ, ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಶಾಸಕ ಆರ್.ವಿ.ದೇಶಪಾಂಡೆ, ಅಲ್ಲಂ ವೀರಭದ್ರಪ್ಪ, ಎಐಸಿಸಿ ಕಾರ್ಯದರ್ಶಿಗಳಾದ ಬೋಸರಾಜು, ಸಂದೀಪ್‌ ಸಮಿತಿಯಲ್ಲಿ ಇರುತ್ತಾರೆ.

ಬಿ.ರಮಾನಾಥ ರೈ, ಎಚ್‌. ಆಂಜನೇಯ, ವಿನಯ್‌ ಕುಮಾರ್ ಸೊರಕೆ, ರಾಣಿ ಸತೀಶ್‌, ಉಮಾಶ್ರೀ, ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ ಸಮಿತಿಗೆ ವಿಶೇಷ ಆಹ್ವಾನಿತರಾಗಿರುವರು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.