ADVERTISEMENT

ಉದ್ಯೋಗ ನೀಡದ ಕೋರ್ಸ್‌ಗಳು ರದ್ದು

​ಪ್ರಜಾವಾಣಿ ವಾರ್ತೆ
Published 15 ಜುಲೈ 2019, 19:45 IST
Last Updated 15 ಜುಲೈ 2019, 19:45 IST
   

ನವದೆಹಲಿ:ಉದ್ಯೋಗವಕಾಶ ಕಡಿಮೆ ಇರುವ ಎಂಜಿನಿಯರಿಂಗ್‌ನ ಸಾಂಪ್ರದಾಯಿಕ ಕೋರ್ಸ್‌ಗಳನ್ನು ರದ್ದುಪಡಿಸಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು (ಎಐಸಿಟಿಇ) ನಿರ್ಧರಿಸಿದೆ.

2020–21ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರಲಿದೆ. ಬದಲಿಗೆ ಉದ್ಯೋಗವಕಾಶ ಹೆಚ್ಚು ಇರುವ ವಿಷಯಗಳಿಗೆ ಒತ್ತು ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ಮಾಹಿತಿ ನೀಡಿದೆ.

ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ವೃತ್ತಿ ಕೌಶಲ ಮತ್ತು ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಸಲುವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಎಂಜಿನಿಯರಿಂಗ್‌ ಪದವೀಧರರ ಕೌಶಲ ಮತ್ತು ಔದ್ಯೋಗಿಕ ಕ್ಷೇತ್ರವು ಬೇಡುವ ಕೌಶಲದ ನಡುವೆ ಭಾರಿ ಅಂತರವಿದೆ. ಈ ಕ್ರಮದಿಂದ ಇಂತಹ ಅಂತರ ಕಡಿಮೆಯಾಗಲಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಲೋಕಸಭೆಗೆ ಮಾಹಿತಿ ನೀಡಿದರು.

ADVERTISEMENT

‘ಉದ್ಯೋಗವಕಾಶ ಹೆಚ್ಚು ಇರುವ ಕೃತಕ ಬುದ್ಧಿಮತ್ತೆ, ಇಂಟರ್‌ನೆಟ್‌ ಆಫ್‌ ಥಿಂಗ್ಸ್‌, ರೊಬೊಟಿಕ್ಸ್, ಡಾಟಾ ಸೈನ್ಸ್‌, ಸೈಬರ್ ಭದ್ರತೆ, 3ಡಿ ವಿನ್ಯಾಸ ಮತ್ತು ಮುದ್ರಣ ಕ್ಷೇತ್ರಗಳಿಗೆ ಹೆಚ್ಚು ಒತ್ತು ನೀಡಲಾಗುತ್ತದೆ’ ಎಂದು ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.