ADVERTISEMENT

ಬಿಹಾರದಲ್ಲಿ ಎಐಎಂಐಎಂ ರಾಜ್ಯ ಕಾರ್ಯದರ್ಶಿ ಅಬ್ದುಲ್ ಸಲಾಂಗೆ ಗುಂಡಿಕ್ಕಿ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಫೆಬ್ರುವರಿ 2024, 4:54 IST
Last Updated 13 ಫೆಬ್ರುವರಿ 2024, 4:54 IST
<div class="paragraphs"><p>ಅಬ್ದುಲ್ ಸಲಾಂ</p></div>

ಅಬ್ದುಲ್ ಸಲಾಂ

   

ಪಟ್ನಾ: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಎಐಎಂಐಎಂ ರಾಜ್ಯ ಕಾರ್ಯದರ್ಶಿ ಅಬ್ದುಲ್ ಸಲಾಂ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಅಬ್ದುಲ್ ಸಲಾಂ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಆರೋಪಿಗಳನ್ನು ಬಂಧಿಸಲು ಎಸ್‌ಐಟಿ ರಚಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ’ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಾಂಜಲ್ ಕುಮಾರ್ ತಿಳಿಸಿದ್ದಾರೆ.

ADVERTISEMENT

‘ಗೋಪಾಲ್‌ಗಂಜ್‌ನಲ್ಲಿ ಎಐಎಂಐಎಂ ರಾಜ್ಯ ಕಾರ್ಯದರ್ಶಿ ಅಬ್ದುಲ್ ಸಲಾಂ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅವರ ಕುಟುಂಬಸ್ಥರಿಗೆ ದುಃಖ ಭರಿಸಲು ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಿವಾನ್ ಜಿಲ್ಲಾಧ್ಯಕ್ಷ ಆರಿಫ್ ಜಮಾಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ನಮ್ಮ ಪಕ್ಷದ ನಾಯಕರೇ ಏಕೆ ಗುರಿಯಾಗುತ್ತಿದ್ದಾರೆ? ಅವರ ಕುಟುಂಬಗಳಿಗೆ ನ್ಯಾಯ ಸಿಗುವುದೇ? ಈ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಉತ್ತರಿಸಲಿ’ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.