ADVERTISEMENT

ಒವೈಸಿ ವಿರುದ್ಧ ಎಫ್‌ಐಆರ್: ಎಐಎಂಐಎಂ ಬೆಂಬಲಿಗರ ಪ್ರತಿಭಟನೆ, 25 ಜನರ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಜೂನ್ 2022, 10:58 IST
Last Updated 9 ಜೂನ್ 2022, 10:58 IST
ಅಸಾದುದ್ದೀನ್‌ ಒವೈಸಿ
ಅಸಾದುದ್ದೀನ್‌ ಒವೈಸಿ    

ನವದೆಹಲಿ: ದ್ವೇಷಪೂರಿತ ಹೇಳಿಕೆಗಳ ಮೂಲಕ ಕೋಮುಭಾವನೆ ಕೆರಳಿಸಿದ ಆರೋಪದ ಮೇಲೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಒವೈಸಿ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಎಐಎಂಐಎಂ ಬೆಂಬಲಿಗರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.

‘ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಎದುರು ಎಐಎಂಐಎಂ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದರು. ಮೂವರು ಮಹಿಳೆಯರು ಸೇರಿದಂತೆ ಸುಮಾರು 25 ಮಂದಿಯನ್ನು ಬಂಧಿಸಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ವಿಧಿ 295ಎ (ಯಾವುದೇ ಧರ್ಮದ ನಂಬಿಕೆಗಳನ್ನು ಅವಮಾನಿಸುವ ದುರುದ್ದೇಶಪೂರಿತ ಕೃತ್ಯಗಳು), 153ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505(2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ADVERTISEMENT

ದ್ವೇಷಪೂರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಬಿಜೆಪಿಯ ನೂಪುರ್‌ ಶರ್ಮಾ ಹಾಗೂ ನವೀನ್‌ ಜಿಂದಾಲ್‌ ಸೇರಿದಂತೆ ಹಲವರು ವಿರುದ್ಧವೂ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.