ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷವು ಇಬ್ಬರು ಮುಸ್ಲಿಮೇತರ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.
ನಿನ್ನೆ ಅಸಾದುದ್ದೀನ್ ಓವೈಸಿ ಅವರು 25 ಅಭ್ಯರ್ಥಿಗಳ ಪಟ್ಟಿಯನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬಿಡುಗಡೆ ಮಾಡಿದ್ದರು.
ಸಿಕಂದರ ವಿಧಾನಸಭಾ ಕ್ಷೇತ್ರದಿಂದ ಮನೋಜ್ ಕುಮಾರ್ ದಾಸ್ ಹಾಗೂ ಢಾಕಾ ಕ್ಷೇತ್ರದಿಂದ ರಾಣಾ ರಂಜಿತ್ ಸಿಂಗ್ ಅವವರಿಗೆ ಟಿಕೆಟ್ ನೀಡಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 19 ಸ್ಥಾನಗಳಲ್ಲಿ ಸ್ಪರ್ಧಿಸಿ ಐದರಲ್ಲಿ ಗೆಲುವು ಸಾಧಿಸಿತ್ತು. ಆದರೆ ಬಳಿಕ ನಾಲ್ವರು ಶಾಸಕರು ಆರ್‌ಜೆಡಿಗೆ ಪಕ್ಷಾಂತರಗೊಂಡಿದ್ದರು.
ಈ ಬಾರಿ 'ಇಂಡಿಯಾ' ಮೈತ್ರಿಕೂಟದ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಎಐಎಂಐಎಂ ಉತ್ಸುಕತೆ ವ್ಯಕ್ತಪಡಿಸಿತ್ತು. ಆದರೆ 'ಇಂಡಿಯಾ' ಮೈತ್ರಿಕೂಟ ಕಡೆಗಣಿಸಿರುವ ಹಿನ್ನೆಲೆಯಲ್ಲಿ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಎಐಎಂಐಎಂ ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.