ಪಿಟಿಐ
ಹೈದರಾಬಾದ್: ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು (ಎಐಎಂಪಿಎಲ್‌ಬಿ) ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಏಪ್ರಿಲ್ 19ರಂದು ಪ್ರತಿಭಟನಾ ಸಭೆ ನಡೆಸಲಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಭಾನುವಾರ ತಿಳಿಸಿದರು.
ಎಐಎಂಪಿಎಲ್‌ಬಿ ಅಧ್ಯಕ್ಷ ಖಾಲಿದ್ ಸೈಫುಲ್ಲಾ ರಹಮಾನಿ ಅವರ ನೇತೃತ್ವದಲ್ಲಿ ಎಐಎಂಐಎಂ ಮುಖ್ಯ ಕಚೇರಿಯಲ್ಲಿ ಸಂಜೆ 7–10ರವರೆಗೆ ಸಭೆ ನಡೆಯಲಿದೆ ಎಂದು ಹೇಳಿದರು.
ತೆಲಂಗಾಣ, ಆಂಧ್ರಪ್ರದೇಶದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯರು ಹಾಗೂ ಎರಡೂ ರಾಜ್ಯಗಳ ಮುಸ್ಲಿಂ ಸಂಘಟನೆಗಳ ಸದಸ್ಯರು ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.