ADVERTISEMENT

ರಾಂಚಿ: ಏಳು ಮಂದಿಯಿದ್ದ ಏರ್‌ ಆಂಬುಲೆನ್ಸ್ ಪತನ

ಪಿಟಿಐ
Published 23 ಫೆಬ್ರುವರಿ 2026, 18:53 IST
Last Updated 23 ಫೆಬ್ರುವರಿ 2026, 18:53 IST
   

ರಾಂಚಿ(ಜಾರ್ಖಂಡ್‌): ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬುಲೆನ್ಸ್‌ ಛತ್ರ ಜಿಲ್ಲೆಯ ಸಿಮಾರಿಯಾ ಬಳಿಯ ಕಾಡಿನಲ್ಲಿ ಪತನಗೊಂಡಿದೆ ಎಂದು ರಾಂಚಿ ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಶೋಧ ಮತ್ತು ರಕ್ಷಣಾ ತಂಡಗಳನ್ನು ರವಾನಿಸಲಾಗಿದೆ. ಸಾವುನೋವುಗಳ ಬಗ್ಗೆ ತಕ್ಷಣದ ಮಾಹಿತಿಯಿಲ್ಲ ಎಂದು ಅವರು ಹೇಳಿದ್ದಾರೆ.

ರಾಂಚಿ ವಿಮಾನ ನಿಲ್ದಾಣದಿಂದ ಸೋಮವಾರ ಸಂಜೆ 7.10ಕ್ಕೆ ಹೊರಟ ಏರ್ ಆಂಬುಲೆನ್ಸ್‌, ಟೇಕ್ ಆಫ್ ಆದ ಸುಮಾರು 20 ನಿಮಿಷಗಳ ನಂತರ ವಾಯು ಸಂಚಾರ ನಿಯಂತ್ರಣದೊಂದಿಗೆ ಸಂಪರ್ಕ ಕಳೆದುಕೊಂಡಿತ್ತು.

ADVERTISEMENT

41 ವರ್ಷದ ರೋಗಿ, ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು ಏಳು ಜನರಿದ್ದರು . ಘಟನೆಗೆ ಪ್ರತಿಕೂಲ ಹವಾಮಾನ ಕಾರಣವಿರಬಹುದು. ತನಿಖೆಯ ನಂತರವೇ ನಿಖರ ಕಾರಣ ತಿಳಿದುಬರಲಿದೆ ಎಂದೂ ಕುಮಾರ್ ಹೇಳಿದ್ದಾರೆ.

‘ರಾಂಚಿ– ದೆಹಲಿ ವಲಯದಲ್ಲಿ ಏರ್‌ ಆಂಬುಲೆನ್ಸ್ ಆಗಿ ಕಾರ್ಯಾಚರಿಸುತ್ತಿದ್ದ ರೆಡ್‌ಬರ್ಡ್‌ ಏರ್‌ವೇಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ‘ಬೀಚ್‌ಕ್ರಾಫ್ಟ್‌ ಸಿ90’ ವಿಮಾನವು ಪತನಗೊಂಡಿದೆ’ ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.