ಚಂಡೀಗಢ: ಲೋಕಸಭೆ ಚುನಾವಣೆ ವೇಳೆಗೆ ಪಂಜಾಬ್‌ನಲ್ಲಿ ವಿಪರೀತ ತಾಪಮಾನ ಇರುವ ಮುನ್ಸೂಚನೆ ಇರುವುದರಿಂದ ಮತಗಟ್ಟೆಗಳಲ್ಲಿ ಏರ್ ಕೂಲರ್, ಫ್ಯಾನ್ ಅಳವಡಿಸಲಾಗುತ್ತದೆ.
ಅಲ್ಲದೇ ಮತದಾರರಿಗೆ ನೀರು, ತಂಪು ಪಾನೀಯ ಹಾಗೂ ಇತರ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಈ ಕುರಿತು ಜಿಲ್ಲಾಧಿಕಾರಿಗಳು ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದಾರೆ ಎಂದು ಪಂಜಾಬ್‌ನ ಮುಖ್ಯ ಚುನಾವಣಾಧಿಕಾರಿ ಸಿಬಿನ್ ಸಿ. ಅವರು ಮಂಗಳವಾರ ಹೇಳಿದ್ದಾರೆ.
ಈ ವರ್ಷ ಪಂಜಾಬ್‌ನಲ್ಲಿ ಅಧಿಕ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮತದಾರರಿಗೆ ಕುಡಿಯುವ ನೀರು, ತಂಪು ಪಾನೀಯ ನೀಡಬೇಕು ಎಂದು ಚುನಾವಣಾ ಆಯೋಗವು ಕಳೆದ ತಿಂಗಳು ನಿರ್ದೇಶನ ನೀಡಿತ್ತು. ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಆದೇಶಿಸಿತ್ತು.
ಜೂನ್ 1ರಂದು ಪಂಜಾಬ್‌ನಲ್ಲಿ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.