ADVERTISEMENT

ಜೋಧ್‌ಪುರ: ಮಿಗ್‌ –27 ಯುದ್ಧ ವಿಮಾನ ಪತನ, ಆಪಾಯದಿಂದ ಪಾರಾದ ಪೈಲೆಟ್‌ 

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2019, 9:14 IST
Last Updated 31 ಮಾರ್ಚ್ 2019, 9:14 IST
   

ರಾಜಸ್ಥಾನ: ಜೋಧ್‌ಪುರದ ಸಿರೋಹಿ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಭಾರತೀಯ ವಾಯುಪಡೆಯ ಮಿಗ್ –27 ಯುದ್ಧ ವಿಮಾನವೊಂದು ಪತನವಾಗಿದ್ದು, ಪೈಲೆಟ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

11.45ಕ್ಕೆ ಬಾರ್ಮರ್‌ ವಾಯು ನೆಲೆಯಿಂದಹೊರಟಿದ್ದ ಮಿಗ್‌– 27 ಯುಪಿಜಿ ವಿಮಾನ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಜೋಧ್‌ಪುರದಿಂದ ಸುಮಾರು 120 ಕಿ.ಮೀ. ದೂರದಲ್ಲಿರುವ ಸಿರೋಹಿ ಪ್ರದೇಶದ ವ್ಯಾಪ್ತಿಯಲ್ಲಿ ಪತನಗೊಂಡಿದೆ.

ಘಟನೆ ನಡೆದ ಸ್ಥಳದಲ್ಲಿ ಯಾವುದೆ ಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿದ್ದಾಗಿ ಎಎನ್‌ಐ ವರದಿ ಮಾಡಿದೆ.

ADVERTISEMENT

ರಾಜಸ್ಥಾನದಲ್ಲಿ ಕೆಲವು ದಿನಗಳಲ್ಲಿ ನಡೆದ ಮೂರನೇ ವಿಮಾನ ದುರಂತ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.