ADVERTISEMENT

ಗುರುಗ್ರಾಮ: ಆಸ್ಪತ್ರೆಯಲ್ಲಿ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ  

ಪಿಟಿಐ
Published 16 ಏಪ್ರಿಲ್ 2025, 4:44 IST
Last Updated 16 ಏಪ್ರಿಲ್ 2025, 4:44 IST
<div class="paragraphs"><p>ಲೈಂಗಿಕ ದೌರ್ಜನ್ಯ –‍ಪ್ರಾತಿನಿಧಿಕ ಚಿತ್ರ</p></div>

ಲೈಂಗಿಕ ದೌರ್ಜನ್ಯ –‍ಪ್ರಾತಿನಿಧಿಕ ಚಿತ್ರ

   

ಗುರುಗ್ರಾಮ: ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಗಗನಸಖಿಯೊಬ್ಬರ ಮೇಲೆ ಸಿಬ್ಬಂದಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 

‘ಸಂತ್ರಸ್ತೆಯ ಹೇಳಿಕೆಯನ್ನು ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ. ಪೊಲೀಸ್ ತಂಡವು ಆಸ್ಪತ್ರೆಯ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳ ತುಣುಕನ್ನು ಪರಿಶೀಲಿಸುತ್ತಿದೆ. ಶೀಘ್ರದಲ್ಲೇ ಆರೋಪಿಯನ್ನು ಗುರುತಿಸಿ, ಬಂಧಿಸಲಾಗುವುದು’ ಎಂದು ಗುರುಗ್ರಾಮ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ADVERTISEMENT

ಪೊಲೀಸ್‌ ಮಾಹಿತಿ ಪ್ರಕಾರ, 46 ವರ್ಷದ ಗಗನಸಖಿ ತಾನು ತಂಗಿದ್ದ ಹೋಟೆಲ್‌ನ ಕೊಳದಲ್ಲಿ ಈಜುತ್ತಿದ್ದಾಗ ಅನಾರೋಗ್ಯಕ್ಕೆ ಒಳಗಾದ ಕಾರಣ ಏ.5 ರಂದು ಗುರುಗ್ರಾಮದ ಆಸ್ಪತ್ರೆಗೆ ದಾಖಲಾಗಿದ್ದರು. ಏ.6 ರಂದು ಆಸ್ಪತ್ರೆಯ ಕೆಲ ಸಿಬ್ಬಂದಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಆಗ ಆಕೆಯನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಭಾನುವಾರ ಆಸ್ಪತ್ರೆಯಿಂದ ಆಕೆ ಬಿಡುಗಡೆಯಾದ ನಂತರ ತನ್ನ ಪತಿಗೆ ಘಟನೆ ಬಗ್ಗೆ ತಿಳಿಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಸೋಮವಾರ ಆಸ್ಪತ್ರೆಯ ಅಪರಿಚಿತ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.