ನವದೆಹಲಿ: ‘ಅಹಮದಾಬಾದ್‌ನಲ್ಲಿ ನಡೆದಿದ್ದ ಏರ್ ಇಂಡಿಯಾ ವಿಮಾನ ಅವಘಾತ ದುರಂತದ ಕುರಿತ ತನಿಖೆಯಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ನಡೆಯುತ್ತಿಲ್ಲ’ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮ್‌ಮೋಹನ್ ನಾಯ್ಡು ಅವರು ಮಂಗಳವಾರ ಹೇಳಿದರು.
ವಿಮಾನ ಅಪಘಾತ ತನಿಖಾ ಸಂಸ್ಥೆ (ಎಎಐಬಿ) ನಡೆಸುತ್ತಿರುವ ತನಿಖೆಯ ಕುರಿತು ಕೆಲವರು ಆಕ್ಷೇಪ ಮತ್ತು ಆತಂಕ ವ್ಯಕ್ತಪಡಿಸಿದ್ದರು. ಈ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿ ಸಚಿವ, ‘ಎಎಐಬಿ ಸಂಸ್ಥೆಯ ಅಂತಿಮ ವರದಿ ಬರುವವರೆಗೂ ಕಾಯಬೇಕು. ನಿಯಮಗಳ ಪ್ರಕಾರವೇ ಎಲ್ಲವೂ ನಡೆಯುತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.