ನವದೆಹಲಿ:ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾವು ತನ್ನ 14 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಿದ್ದು, ಇದರಿಂದ ₹250 ಕೋಟಿ ಪಡೆಯಲು ನಿರ್ಧರಿಸಿದೆ ಎಂದು ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏರ್ ಇಂಡಿಯಾವನ್ನು ಸಾಲದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಲಿದೆ ಎಂದು ಹೇಳಲಾಗಿದೆ. ಈ ಸಂಬಂಧ ಜಾಹೀರಾತು ಪ್ರಕಟವಾಗಲಿದ್ದು, ಹರಾಜಿನಲ್ಲಿ ಪಾಲ್ಗೊಳ್ಳುವ ಕೊನೆಯ ದಿನಾಂಕ ನವೆಂಬರ್ 1 ಎಂದು ಅಧಿಕಾರಿಗಳು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.