ADVERTISEMENT

ಚಿನ್ನ ಕಳ್ಳಸಾಗಣೆ: ಕೊಚ್ಚಿಯಲ್ಲಿ ಏರ್‌ ಇಂಡಿಯಾ ಸಿಬ್ಬಂದಿ ಬಂಧನ

ಪಿಟಿಐ
Published 9 ಮಾರ್ಚ್ 2023, 14:17 IST
Last Updated 9 ಮಾರ್ಚ್ 2023, 14:17 IST
ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ
ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ   

ಕೊಚ್ಚಿ: ಸುಮಾರು 1.4 ಕೆ.ಜಿಗೂ ಹೆಚ್ಚಿನ ಪ್ರಮಾಣದ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದ ಕ್ಯಾಬಿನ್‌ ಸಿಬ್ಬಂದಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಗುರುವಾರ ಅಧಿಕೃತ ಮೂಲಗಳು ತಿಳಿಸಿವೆ.

ಬಹ್ರೇನ್–ಕೋಯಿಕೋಡ್‌–ಕೊಚ್ಚಿ ನಡುವೆ ಹಾರಾಟ ನಡೆಸುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದ ಸಿಬ್ಬಂದಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಬಂಧಿಸಿದ್ದು, ಅವರ ಕೈಯಲ್ಲಿ ಬಚ್ಚಿಟ್ಟುಕೊಂಡಿದ್ದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದ್ದು, ಇಂತಹ ಘಟನೆಗಳ ಬಗ್ಗೆ ಏರ್‌ಲೈನ್‌ ಶೂನ್ಯ ಸಹಿಷ್ಣುತೆ ಹೊಂದಿದೆ ಎಂದು ಏರ್ ಇಂಡಿಯಾ ತಿಳಿಸಿದೆ. ಅಧಿಕಾರಿಗಳು ವಿಚಾರಣೆ ನಡೆಸಿ ತನಿಖಾ ವರದಿ ನೀಡಿದ ನಂತರ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸ್ಥೆ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.