ADVERTISEMENT

ಹೈದರಾಬಾದ್‌ಗೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನ ತುರ್ತು ಭೂ ಸ್ಪರ್ಶ

ಪಿಟಿಐ
Published 18 ಸೆಪ್ಟೆಂಬರ್ 2025, 15:58 IST
Last Updated 18 ಸೆಪ್ಟೆಂಬರ್ 2025, 15:58 IST
<div class="paragraphs"><p>ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌</p></div>

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌

   

ವಿಶಾಖಪಟ್ಟಣ: ಇಲ್ಲಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಮಾರ್ಗ ಮಧ್ಯೆ ಎಂಜಿನ್‌ ಸಮಸ್ಯೆ ಎದುರಾದ ಕಾರಣಕ್ಕೆ ವಿಮಾನ ನಿಲ್ದಾಣಕ್ಕೆ ವಾಪಸಾಗಿ ತುರ್ತು ಭೂ ಸ್ಪರ್ಶ ಮಾಡಿರುವ ಘಟನೆ ಗುರುವಾರ ನಡೆದಿದೆ. ವಿಮಾನಕ್ಕೆ ಹಕ್ಕಿಯೊಂದು ಅಪ್ಪಳಿಸಿದ ಪರಿಣಾಮ ಎಂಜಿನ್‌ ಸಮಸ್ಯೆ ಉಂಟಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ‘103 ಮಂದಿ ಪ್ರಯಾಣಿಕರಿದ್ದ  IX 2658 ಸಂಖ್ಯೆಯ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಮಧ್ಯಾಹ್ನ 2.38ಕ್ಕೆ ವಿಮಾನ ನಿಲ್ದಾಣದಿಂದ ಹೊರಟಿತ್ತು. 18–19 ಕಿ.ಮೀ. ದೂರ ಕ್ರಮಿಸುತ್ತಿದ್ದಂತೆಯೇ ಪೈಟಲ್‌ ಎಂಜಿನ್‌ ಸಮಸ್ಯೆಯ ಕಾರಣ ನೀಡಿ ತುರ್ತು ಭೂ ಸ್ಪರ್ಶಕ್ಕೆ ಅನುಮತಿ ಕೋರಿದರು. 3 ಗಂಟೆ ವೇಳೆಗಾಗಲೇ ವಿಮಾನ ಹಿಂದಿರುಗಿ ಸುರಕ್ಷಿತವಾಗಿ ತುರ್ತು ಭೂ ಸ್ಪರ್ಶ ಮಾಡಿದೆ’ ಎಂದು ವಿಶಾಖಪಟ್ಟಣ ವಿಮಾನ ನಿಲ್ದಾಣದ ನಿರ್ದೇಶಕ ಎಸ್‌.ರಾಜಾ ರೆಡ್ಡಿ ತಿಳಿಸಿದ್ದಾರೆ.

ADVERTISEMENT

ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದು, ಅವರಿಗೆ ಪ್ರಯಾಣಕ್ಕೆ ಬೇರೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದೂ ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.