ಏರ್ ಇಂಡಿಯಾ
(ಪ್ರಾತಿನಿಧಿಕ ಚಿತ್ರ)
ಅಹಮದಾಬಾದ್: ಇಂದು (ಮಂಗಳವಾರ) ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವನ್ನು ಕಾರ್ಯಾಚರಣೆ ಸಮಸ್ಯೆಗಳಿಂದಾಗಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏರ್ ಇಂಡಿಯಾ ವಿಮಾನ ಹಠಾತ್ ಆಗಿ ರದ್ದುಗೊಂಡಿದ್ದರ ಪರಿಣಾಮ ಪ್ರಯಾಣಿಕರು ತೊಂದರೆಗೆ ಒಳಗಾಗಿದ್ದಾರೆ.
ಅಹಮದಾಬಾದ್‌ನಿಂದ ಲಂಡನ್‌ನ ಗಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಎಐ-159 ವಿಮಾನ ರದ್ದುಗೊಂಡಿದೆ ಎಂದು ಏರ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ನಲ್ಲೂ ಖಚಿತಪಡಿಸಲಾಗಿದೆ.
ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಮಧ್ಯಾಹ್ನ ಮೂರು ಗಂಟೆಗೆ ವಿಮಾನ ಹೊರಡಬೇಕಿತ್ತು.
ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತದ ಬಳಿಕ ಎಐ-171 ಎಂಬ ಕೋಡ್ ಹೆಸರನ್ನು ಎಐ-159 ಎಂದು ಬದಲಿಸಿ ಸೋಮವಾರದಿಂದ ಕಾರ್ಯಾಚರಣೆ ಪುನರರಾಂಭಿಸಲಾಗಿತ್ತು.
ವಿಮಾನ ರದ್ದುಗೊಂಡಿರುವುದಕ್ಕೆ ಸಂಬಂಧಿಸಿದಂತೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಇತ್ತೇ ಎಂಬುದು ತಿಳಿದು ಬಂದಿಲ್ಲ.
ಜೂನ್ 12ರಂದು ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ವಿಮಾನ ದುರಂತದಲ್ಲಿ 241 ಪ್ರಯಾಣಿಕರು ಸೇರಿದಂತೆ ಒಟ್ಟು 275 ಮಂದಿ ಮೃತಪಟ್ಟಿದ್ದರು. ದುರಂತದಲ್ಲಿ ಓರ್ವ ಪ್ರಯಾಣಿಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.