ADVERTISEMENT

ಸ್ಯಾನ್ ಫ್ರಾನ್ಸಿಸ್ಕೊ ಟು ಮುಂಬೈ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ

ಪಿಟಿಐ
Published 17 ಜೂನ್ 2025, 2:08 IST
Last Updated 17 ಜೂನ್ 2025, 2:08 IST
<div class="paragraphs"><p>ಏರ್ ಇಂಡಿಯಾ (ಸಾಂದರ್ಭಿಕ ಚಿತ್ರ)</p></div>

ಏರ್ ಇಂಡಿಯಾ (ಸಾಂದರ್ಭಿಕ ಚಿತ್ರ)

   

–ಪಿಟಿಐ ಚಿತ್ರ

ಕೋಲ್ಕತ್ತ: ಸ್ಯಾನ್ ಫ್ರಾನ್ಸಿಸ್ಕೊದಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಒಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಮಂಗಳವಾರ ಕೋಲ್ಕತ್ತ ವಿಮಾನ ನಿಲ್ದಾಣದಲ್ಲಿ ನಿಗದಿತ ನಿಲುಗಡೆಯ ಸಮಯದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ.

AI180 ವಿಮಾನವು ಮಧ್ಯರಾತ್ರಿ 12.45 ಕ್ಕೆ ವಿಮಾನ ನಿಲ್ದಾಣಕ್ಕೆ ಕ್ಕೆ ಬಂದಿತ್ತು. ಆದರೆ, ಎಡ ಎಂಜಿನ್‌ನಲ್ಲಿನ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ವಿಳಂಬವಾಯಿತು.

ಬೆಳಗಿನ ಜಾವ ಸುಮಾರು 5.20ಕ್ಕೆ ವಿಮಾನದಿಂದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸುವಂತೆ ಘೋಷಣೆ ಮಾಡಲಾಯಿತು.

ವಿಮಾನದ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಿಮಾನದ ಕ್ಯಾಪ್ಟನ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.