
ಏರ್ ಇಂಡಿಯಾ
(ಚಿತ್ರ ಕೃಪೆ: ಏರ್ ಇಂಡಿಯಾ)
ಭೋಪಾಲ್: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಭೋಪಾಲ್‌ನತ್ತ ಮಾರ್ಗ ಬದಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನವನ್ನು ರಾಜಭೋಜ್ ವಿಮಾನ ನಿಲ್ದಾಣದಲ್ಲಿ ಸೋಮವಾರ ರಾತ್ರಿ ಸುರಕ್ಷಿತವಾಗಿ ಇಳಿಸಲಾಗಿದೆ. ವಿಮಾನದಲ್ಲಿ 172 ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ.
‘ವಿಮಾನದ ಕಾರ್ಗೋ ವಿಭಾಗದಲ್ಲಿ ಎಚ್ಚರಿಕೆ ನೀಡಿದ ನಂತರ ವಿಮಾನವನ್ನು (ಎಐಸಿ 2487, ಎ320 ನಿಯೋ, ವಿಟಿ–ಇಎಕ್ಸ್‌ಒ) ಭೋಪಾಲ್‌ಗೆ ತಿರುಗಿಸಲಾಯಿತು. ಇದರಿಂದ ಇತರೆ ವಿಮಾನಗಳ ಕಾರ್ಯಾಚರಣೆ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ’ ಎಂದು ವಿಮಾನ ನಿಲ್ದಾಣದ ನಿರ್ದೇಶಕ ರಾಮ್‌ಜಿ ಅವಸ್ಥಿ ತಿಳಿಸಿದ್ದಾರೆ.
‘ಸುರಕ್ಷತಾ ಕಾರ್ಯವಿಧಾನಗಳನ್ನು ಅನುಸರಿಸಿ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ಪ್ರಯಾಣಿಕರು ಸುರಕ್ಷಿತವಾಗಿರುವುದನ್ನು ಮನಗಂಡು ಕೆಲವೇ ನಿಮಿಷಗಳ ಬಳಿಕ ತುರ್ತು ಪರಿಸ್ಥಿತಿಯನ್ನು ತೆರವುಗೊಳಿಸಲಾಯಿತು’ ಎಂದು ರಾಮ್‌ಜಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.