ಏರ್ ಇಂಡಿಯಾ
(ಚಿತ್ರ ಕೃಪೆ: ಏರ್ ಇಂಡಿಯಾ)
ನವದೆಹಲಿ: ದೆಹಲಿಯಿಂದ ಇಂದೋರ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನವು ಕೂಡಲೇ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ವಿಮಾನ ಹಾರಾಟ ಪ್ರಾರಂಭವಾದ 30 ನಿಮಿಷಗಳ ಬಳಿಕ ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಏರ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು ಬೆಳಿಗ್ಗೆ 6:15ರ ಸುಮಾರಿಗೆ ತುರ್ತು ಭೂಸ್ಪರ್ಶ ಮಾಡಿದ ಎ320 ನಿಯೊ ವಿಮಾನದಲ್ಲಿ 90ಕ್ಕೂ ಹೆಚ್ಚು ಜನರಿದ್ದರು. ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿಮಾನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಗಮನಿಸಿದ ಪೈಲಟ್‌ಗಳು, ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ. ಇದರಿಂದ ಆಗಬಹುದಾದ ಭಾರಿ ಅನಾಹುತ ತಪ್ಪಿದೆ.
ಪ್ರಯಾಣಿಕರಿಗೆ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಗುವುದು ಶೀಘ್ರದಲ್ಲೇ ಇಂದೋರ್‌ಗೆ ಪ್ರಯಾಣ ಬೆಳಸಲಿದ್ದಾರೆ ಎಂದು ಏರ್ ಇಂಡಿಯಾ ಹೇಳಿಕೆ ನೀಡಿತ್ತು.
ಇತ್ತೀಚಿಗೆ ಏರ್ ಇಂಡಿಯಾ ವಿಮಾನಗಳಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಳ್ಳುತ್ತಿರುವ ಘಟನೆಗಳು ಹೆಚ್ಚು ವರದಿಯಾಗುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.