ADVERTISEMENT

ತಾಂತ್ರಿಕ ದೋಷ: ಬೆಂಗಳೂರು–ದೆಹಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಪಿಟಿಐ
Published 7 ಜನವರಿ 2025, 4:16 IST
Last Updated 7 ಜನವರಿ 2025, 4:16 IST
<div class="paragraphs"><p>ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ</p></div>

ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ

   

(ಪಿಟಿಐ ಚಿತ್ರ)

ಬೆಂಗಳೂರು: ದೆಹಲಿಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ತಾಂತ್ರಕ ದೋಷ ಕಾಣಿಸಿಕೊಂಡ ಪರಿಣಾಮ ಭಾನುವಾರ ತುರ್ತು ಭೂಸ್ಪರ್ಶ ಮಾಡಿದೆ.

ADVERTISEMENT

ವಿಮಾನದ ಒಂದು ಎಂಜಿನ್‌ ಕೆಲಸ ನಿಲ್ಲಿಸಿದ ಕಾರಣ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಬೆಂಗಳೂರು ಕೇಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾನುವಾರ ಸಂಜೆ 7ಗಂಟೆಗೆ 2820 ವಿಮಾನ ಟೇಕಾಫ್ ಆಗಿತ್ತು. ಹೊರಟ ಕೆಲವೇ ನಿಮಿಷಗಳಲ್ಲಿ ವಿಮಾನದ ಒಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿತು. ನಂತರ ಸಿಬ್ಬಂದಿ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ವಿಮಾನವು ಒಂದು ಗಂಟೆ ಬೆಂಗಳೂರಿನ ಸುತ್ತ ತಿರುಗಿ ಮತ್ತೆ ಭೂಸ್ಪರ್ಶ ಮಾಡಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಘಟನೆಯ ಬಗ್ಗೆ ತಾಂತ್ರಿಕ ವಿವರಗಳು ನಮಗೆ ಲಭ್ಯವಿಲ್ಲ, ಆದರೆ ವಿಮಾನ ತುರ್ತು ಭೂಸ್ಪರ್ಶ ಮಾಡಿತು ಎಂದು ವಿಮಾನಯಾನ ಅಧಿಕಾರಿಗಳು ಮಂಗಳವಾರ ತಿಳಿಸಿದರು. ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಮತ್ತು ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.