ADVERTISEMENT

ಜು.15ರವರೆಗೆ ಸಣ್ಣ ಗಾತ್ರದ ವಿಮಾನಗಳ ಹಾರಾಟ ಸ್ಥಗಿತಗೊಳಿಸಿದ ಏರ್ ಇಂಡಿಯಾ

ಶಮಿನ್‌ ಜಾಯ್‌
Published 22 ಜೂನ್ 2025, 15:32 IST
Last Updated 22 ಜೂನ್ 2025, 15:32 IST
<div class="paragraphs"><p>ಏರ್ ಇಂಡಿಯಾ</p></div>

ಏರ್ ಇಂಡಿಯಾ

   

(ಚಿತ್ರ ಕೃಪೆ: ಏರ್ ಇಂಡಿಯಾ)

ನವದೆಹಲಿ: ಜೂನ್ 21ರಿಂದ ಜುಲೈ 15ರವರೆಗೆ ಸಣ್ಣ ಗಾತ್ರದ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಘೋಷಿಸಿದೆ.

ADVERTISEMENT

ಮೂರು ಮಾರ್ಗಗಳಲ್ಲಿ ಸೇವೆಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಜತೆಗೆ, ದೇಶೀಯ 19 ಮಾರ್ಗಗಳಲ್ಲಿನ ವಿಮಾನಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

ಜೂನ್ 21ರಿಂದ ಜುಲೈ 15ರವರೆಗೆ ವಾರಕ್ಕೆ 38 ಅಂತರರಾಷ್ಟ್ರೀಯ ವಿಮಾನಗಳನ್ನು ಕಡಿಮೆ ಮಾಡುವುದಾಗಿ ಮತ್ತು ಮೂರು ವಿದೇಶಿ ಮಾರ್ಗಗಳಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ವಿಮಾನಯಾನ ಸಂಸ್ಥೆ ಈ ಹಿಂದೆ ಪ್ರಕಟಿಸಿತ್ತು.

ವಿಮಾನ ಸಂಚಾರದಲ್ಲಿ ತಾತ್ಕಾಲಿಕ ಕಡಿತದ ಹೊರತಾಗಿಯೂ ಏರ್‌ ಇಂಡಿಯಾ ನಿತ್ಯ 600 ಹಾರಾಟವನ್ನು ನಡೆಸಲಿದೆ. ಇದು 120 ದೇಶೀಯ ಮತ್ತು ಅಲ್ಪಾವಧಿಯ ಅಂತರರಾಷ್ಟ್ರೀಯ ಮಾರ್ಗಗಳನ್ನು ಒಳಗೊಂಡಿದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಇರಾನ್ ಮೇಲೆ ಅಮೆರಿಕ ದಾಳಿ ನಡೆಸಿದ ನಂತರ ಗಲ್ಫ್ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆಯೇ ಏರ್‌ ಇಂಡಿಯಾ ವಿಮಾನಗಳು ಇರಾನ್, ಇರಾಕ್ ಮತ್ತು ಇಸ್ರೇಲ್ ವಾಯುಪ್ರದೇಶದಲ್ಲಿ ಕಾರ್ಯನಿರ್ವಹಿಸುವುದಿಲ್ಲ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಮುಂಜಾಗ್ರತಾ ಕ್ರಮವಾಗಿ ಮುಂದಿನ ದಿನಗಳಲ್ಲಿ ಪರ್ಷಿಯನ್ ಕೊಲ್ಲಿಯ ವಾಯುಪ್ರದೇಶದ ಬಳಕೆಯನ್ನು ಹಂತ ಹಂತವಾಗಿ ತಪ್ಪಿಸಲಾಗುವುದು. ಜತೆಗೆ, ಯುಎಇ, ಕತಾರ್, ಒಮನ್ ಮತ್ತು ಕುವೈತ್ ಸೇರಿದಂತೆ ಇತರೆ ಸ್ಥಳಗಳಿಗೆ ಪರ್ಯಾಯ ಮಾರ್ಗಗಳನ್ನು ಬಳಸಲಾಗುತ್ತದೆ. ಇದರಿಂದಾಗಿ ಯುರೋಪ್ ಮತ್ತು ಉತ್ತರ ಅಮೆರಿಕಕ್ಕೆ ತೆರಳುವ ಆಯ್ದ ವಿಮಾನಗಳಿಗೆ ಹಾರಾಟದ ಅವಧಿ ವಿಸ್ತರಿಸಲಾಗುತ್ತದೆ ಎಂದೂ ಹೇಳಿದೆ.

‘ಭದ್ರತಾ ಸಲಹೆಗಾರರೊಂದಿಗೆ ನಿರಂತರ ಸಮಾಲೋಚನೆಯಲ್ಲಿದ್ದೇವೆ. ಪರಿಸ್ಥಿತಿಯನ್ನು ಜಾಗರೂಕತೆಯಿಂದ ಮೇಲ್ವಿಚಾರಣೆ ಮಾಡಲಾಗುತ್ತಿದೆ. ನಮ್ಮ ಪ್ರಯಾಣಿಕರು, ಸಿಬ್ಬಂದಿ ಮತ್ತು ವಿಮಾನಗಳ ಸುರಕ್ಷತೆ ಮೊದಲ ಆದ್ಯತೆಯಾಗಿದೆ’ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.