ಏರ್ ಇಂಡಿಯಾ
(ಚಿತ್ರ ಕೃಪೆ: ಏರ್ ಇಂಡಿಯಾ)
ಮುಂಬೈ: ಹಾಂಗ್‌ಕಾಂಗ್‌ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹಾಂಗ್‌ಕಾಂಗ್ ವಿಮಾನ ನಿಲ್ದಾಣದಲ್ಲೇ ಲ್ಯಾಂಡಿಂಗ್ ಆಗಿದೆ ಎಂದು ಮೂಲಗಳು ತಿಳಿಸಿವೆ.
ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಬಗ್ಗೆ ಪೈಲಟ್ ಅನುಮಾನ ವ್ಯಕ್ತಪಡಿಸಿದ್ದರು. ಕೂಡಲೇ ವಿಮಾನವು ಹಾಂಗ್‌ಕಾಂಗ್ ವಿಮಾನ ನಿಲ್ದಾಣಕ್ಕೆ ವಾಪಸ್ ಆಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನವು ಹಾಂಗ್ ಕಾಂಗ್‌ನಿಂದ ಬೆಳಿಗ್ಗೆ 9.50ಕ್ಕೆ (ಭಾರತೀಯ ಕಾಲಮಾನ, ಹಾಂಗ್ ಕಾಂಗ್ ಕಾಲಮಾನ 12.16) ಹೊರಟು ಮಧ್ಯಾಹ್ನ 12.20ಕ್ಕೆ ದೆಹಲಿಗೆ ಬಂದಿಳಿಯಬೇಕಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.