ADVERTISEMENT

ಸಿಬ್ಬಂದಿಯ ಕೊರೊನಾ ಪರೀಕ್ಷೆ ವರದಿ ದೃಢೀಕರಣ ಕಡ್ಡಾಯಗೊಳಿಸಿದ ಏರ್ ಇಂಡಿಯಾ

ಪಿಟಿಐ
Published 31 ಮೇ 2020, 13:16 IST
Last Updated 31 ಮೇ 2020, 13:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ಏರ್ ಇಂಡಿಯಾವು ತನ್ನ ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿಗೆ ಕೋವಿಡ್‌–19 ಪರೀಕ್ಷಾ ಫಲಿತಾಂಶ ನೆಗೆಟಿವ್ ಆಗಿದೆಯೇ ಎಂಬುದರ ಪರಿಶೀಲನೆ ಮತ್ತು ದೃಢೀಕರಣವನ್ನು ಕಡ್ಡಾಯಗೊಳಿಸಿದೆ.

ಶನಿವಾರ ದೆಹಲಿಯಿಂದ ಮಾಸ್ಕೊಗೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನದ ಪೈಲಟ್‌ಗೆ ಕೊರೊನಾ ವೈರಸ್ ಸೋಂಕು ತಗಲಿದ್ದು ದೃಢಪಟ್ಟಿತ್ತು. ಆಗ ಪೈಲಟ್ ಅನ್ನು ವಾಪಸ್ ಕರೆಸಿಕೊಳ್ಳಲಾಗಿತ್ತು.ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಈ ಕ್ರಮಕ್ಕೆ ಮುಂದಾಗಿದೆ.

‘ಏರ್‌ ಇಂಡಿಯಾವು ಗಣನೀಯ ವೆಚ್ಚದಲ್ಲಿ ಕೋವಿಡ್‌–19‍ಪರೀಕ್ಷೆಯನ್ನು ನಡೆಸುತ್ತಿದೆ. ಇತ್ತೀಚೆಗೆ ಕಚೇರಿಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಈ ವಿಷಯದಲ್ಲಿ ಮೇಲ್ವಿಚಾರಣೆಯಲ್ಲಿ ಅಜಾಗೂರುಕತೆ ನಡೆದಿರುವ ಸಾಧ್ಯತೆ ಇದೆ’ ಎಂದು ಏರ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ (ಕಾರ್ಯಾಚರಣೆ) ಕ್ಯಾಪ್ಟನ್ ಆರ್.ಎಸ್. ಸಂಧು ತಿಳಿಸಿದ್ದಾರೆ.

ADVERTISEMENT

‘ವಿಮಾನಯಾನ ಸಿಬ್ಬಂದಿ ಕೂಡಾ ತನ್ನ ಪರೀಕ್ಷಾ ವರದಿಯನ್ನು ಪರಿಶೀಲಿಸಿ, ಮರು ದೃಢೀಕರಿಸುವುದು ಕಡ್ಡಾಯ ಮಾಡಲಾಗಿದೆ’ ಎಂದು ಅವರು ಹೇಳಿದ್ದಾರೆ.

‘ಶನಿವಾರದ ಘಟನೆಯಲ್ಲಿ ಇಬ್ಬರು ಹಿರಿಯ ಅಧಿಕಾರಿಗಳು ಕೊರೊನಾ ವೈರಸ್ ಪರೀಕ್ಷಾ ವರದಿಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಂಡಿರುವುದು ಕಂಡು ಬಂದಿದೆ. ಈ ಬಗ್ಗೆ ಈಗಾಗಲೇ ವಾಯುಯಾನ ನಿಯಂತ್ರಕ ಡಿಜಿಸಿಎ ಪ್ರಾಥಮಿಕ ವರದಿ ನೀಡಿದ್ದಾರೆ. ಇದರ ಆಧಾರದ ಮೇಲೆ ಪ್ರಕರಣದ ತನಿಖೆಯನ್ನು ಪ್ರಾರಂಭಿಸಲಾಗಿದೆ’ ಎಂದೂ ಸಂಧು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.