ವಿಮಾನ ಪತನಗೊಂಡ ಸ್ಥಳದಲ್ಲಿ ದಟ್ಟಹೊಗೆ ಆವರಿಸಿರುವುದು
ಪಿಟಿಐ ಚಿತ್ರ
ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್‌ವಿಕ್‌ಗೆ ಪ್ರಯಾಣ ಆರಂಭಿಸಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿದೆ.
AI–171 ವಿಮಾನವು ಮೇಘಾನಿನಗರ್ ಪ್ರದೇಶದಲ್ಲಿ ಇಂದು (ಗುರುವಾರ) ಮಧ್ಯಾಹ್ನ 1.40ರ ಸುಮಾರಿಗೆ ಪತನಗೊಂಡಿದೆ.
ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 242 ಪ್ರಯಾಣಿಕರು ದುರಂತಕ್ಕೀಡಾದ ವಿಮಾನದಲ್ಲಿ ಇದ್ದರು ಎನ್ನಲಾಗುತ್ತಿದೆ. ಆದರೆ, ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಕೆಲವು ವಿಡಿಯೊಗಳು ಇಲ್ಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.