ADVERTISEMENT

ಏರ್ ಇಂಡಿಯಾ ದುರಂತ | ಡಿಎನ್‌ಎ ಪರೀಕ್ಷೆ; 32 ಜನರ ಗುರುತು ಪತ್ತೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2025, 6:40 IST
Last Updated 15 ಜೂನ್ 2025, 6:40 IST
<div class="paragraphs"><p>ಅಹಮದಾಬಾದ್‌ನಲ್ಲಿ ಪತನಗೊಂಡು ಕಟ್ಟಡಕ್ಕೆ ಅಪ್ಪಳಿಸಿದ ಏರ್ ಇಂಡಿಯಾ ವಿಮಾನದ ಅವಶೇಷ </p></div>

ಅಹಮದಾಬಾದ್‌ನಲ್ಲಿ ಪತನಗೊಂಡು ಕಟ್ಟಡಕ್ಕೆ ಅಪ್ಪಳಿಸಿದ ಏರ್ ಇಂಡಿಯಾ ವಿಮಾನದ ಅವಶೇಷ

   

–ಪಿಟಿಐ ಚಿತ್ರ

ಅಹಮದಾಬಾದ್: ಏರ್ ಇಂಡಿಯಾ ದುರಂತದಲ್ಲಿ ಮೃತಪಟ್ಟ 32 ಜನರ ಗುರುತನ್ನು ಡಿಎನ್‌ಎ ಪರೀಕ್ಷೆಯ ಮೂಲಕ ಪತ್ತೆ ಹಚ್ಚಲಾಗಿದೆ. ಇದುವರೆಗೂ 14 ಕುಟುಂಬಗಳಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ADVERTISEMENT

ಅನೇಕ ಮೃತದೇಹಗಳು ಗುರುತು ಸಿಗದಷ್ಟು ಸುಟ್ಟುಹೋಗಿವೆ. ಹೀಗಾಗಿ ಗುರುತನ್ನು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದುವರೆಗೂ 32 ಡಿಎನ್‌ಎ ಮಾದರಿಗಳು ಹೊಂದಾಣಿಕೆಯಾಗಿವೆ. ಈಗಾಗಲೇ 14 ಮೃತದೇಹಗಳನ್ನು ಆಯಾ ಕುಟುಂಬಗಳಿಗೆ ಹಸ್ತಾಂತರಿಸಲಾಗಿದ್ದು, ಉದಯಪುರ, ವಡೋದರಾ, ಖೇಡಾ, ಮೆಹ್ಸಾನಾ, ಅಹಮದಾಬಾದ್ ಮತ್ತು ಬೋಟಾಡ್ ಜಿಲ್ಲೆಗೆ ಸೇರಿದ್ದವರು.

ವಿಜಯ್ ರೂಪಾನಿ ಮೃತದೇಹ ಶೋಧ ಕಾರ್ಯ ಚುರುಕು

ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಮೃತದೇಹ ಪತ್ತೆಗಾಗಿ ಡಿಎನ್‌ಎ ಹೊಂದಾಣಿಕೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏರ್‌ ಇಂಡಿಯಾ ವಿಮಾನ ದುರಂತದ ಕಾರಣ ಪತ್ತೆಹಚ್ಚಲು ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ಶನಿವಾರ ರಚಿಸಿದೆ. ಈ ಮಧ್ಯೆ, ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ.‘ಅಪಘಾತಕ್ಕೆ ಕಾರಣವಾದ ಅಂಶಗಳನ್ನು ಪರಿಶೀಲಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸುವುದನ್ನು ತಡೆಯಲು ಬೇಕಾದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಸಿದ್ಧಪಡಿಸಲು ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ ಮೋಹನ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ’ ಎಂದು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರು ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಜೂನ್‌ 12ರಂದು (ಗುರುವಾರ) ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು, ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಸೇರಿದಂತೆ ಕನಿಷ್ಠ 270 ಮಂದಿ ಮೃತಪಟ್ಟಿದ್ದರು.

ವಿಮಾನ ಅಪಘಾತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕ ವಿಶ್ವಾಸ್‌ ಕುಮಾರ್ ರಮೇಶ್‌ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.