ADVERTISEMENT

ಮುಂಬೈ: ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ, ತಪ್ಪಿದ ಭಾರಿ ಅವಘಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜುಲೈ 2025, 9:09 IST
Last Updated 21 ಜುಲೈ 2025, 9:09 IST
<div class="paragraphs"><p>ಏರ್ ಇಂಡಿಯಾ ವಿಮಾನ</p></div>

ಏರ್ ಇಂಡಿಯಾ ವಿಮಾನ

   

(ಪ್ರಾತಿನಿಧಿಕ ಚಿತ್ರ)

ಮುಂಬೈ: ನಗರದ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ವೇಳೆ ಏರ್ ಇಂಡಿಯಾ ವಿಮಾನವೊಂದು ರನ್‌ವೇಯಲ್ಲಿ ಜಾರಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ADVERTISEMENT

ಕೊಚ್ಚಿಯಿಂದ ಬಂದಿದ್ದ ಏರ್ ಇಂಡಿಯಾ ವಿಮಾನವು (ಬೋಯಿಂಗ್‌ AI2744) ಬೆಳಿಗ್ಗೆ 9.27ರ ಸುಮಾರಿಗೆ ಇಳಿಯುವುದಕ್ಕಾಗಿ ರನ್‌ವೇಯಲ್ಲಿ ಸಂಚರಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ರನ್‌ವೇಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರಿ ಮಳೆಯ ಪರಿಣಾಮವಾಗಿ ಕಡಿಮೆ ಗೋಚರತೆ ಇದ್ದುದರಿಂದ ವಿಮಾನವು ರನ್‌ವೇನಿಂದ ಜಾರಿದೆ. ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿ ಸುರಕ್ಷಿತವಾಗಿದ್ದು, ವಿಮಾನವನ್ನು ತಪಾಸಣೆ ನಡೆಸಲಾಗುತ್ತಿದೆ ಎಂದು ಏರ್ ಇಂಡಿಯಾ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದೆ.

ಜೂನ್‌ 12ರಂದು ಅಹಮದಾಬಾದ್‌ನ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳಲು ಏರ್‌ ಇಂಡಿಯಾ ವಿಮಾನ (ಬೋಯಿಂಗ್‌ 787 ಡ್ರೀಮ್‌ಲೈನರ್) ಟೇಕ್‌–ಆಫ್‌ ಆದ ಕೆಲವೇ ಕ್ಷಣಗಳಲ್ಲಿ ಮೇಘಾನಿನಗರದ ವೈದ್ಯಕೀಯ ಕಾಲೇಜಿನ ಸಂಕೀರ್ಣದಲ್ಲಿದ್ದ ಕಟ್ಟಡಕ್ಕೆ ಅಪ್ಪಳಿಸಿತ್ತು. ವಿಮಾನದಲ್ಲಿದ್ದ 241 ಪ್ರಯಾಣಿಕರು, ಸಿಬ್ಬಂದಿ ಹಾಗೂ ಘಟನಾ ಸ್ಥಳದಲ್ಲಿದ್ದ 19 ಮಂದಿ ಮೃತಪಟ್ಟಿದ್ದರು. ಪ್ರಯಾಣಿಕರೊಬ್ಬರು ಅಪಾಯದಿಂದ ಪಾರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.