ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಸಂಭವನೀಯ ಆಕ್ರಮಣ ಭೀತಿ ಹಿನ್ನೆಲೆಯಲ್ಲಿ ತನ್ನ ಪ್ರಜೆಗಳನ್ನು ಕರೆತರಲು ಭಾರತ ಮುಂದಾಗಿದೆ.
ಭಾರತೀಯರನ್ನು ಕರೆತರಲು ಮೂರು ವಿಶೇಷ ವಿಮಾನಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಆದರಂತೆ ಏರ್ ಇಂಡಿಯಾ ವಿಶೇಷ ವಿಮಾನವು ಇಂದು (ಫೆ.22) ಬೆಳಿಗ್ಗೆ ಭಾರತದಿಂದ ಉಕ್ರೇನ್‌ಗೆ ಹೊರಟಿದೆ.
200 ಆಸನಗಳ ಸಾಮರ್ಥ್ಯದ ಡ್ರೀಮ್ ಲೈನರ್ B-787 ವಿಮಾನವು ಇಂದು ರಾತ್ರಿ ಉಕ್ರೇನ್‌ನಿಂದ ದೆಹಲಿಗೆ ಬಂದಿಳಿಯಲಿದೆ. ಉಳಿದಂತೆ ಫೆ.24 ಮತ್ತು ಫೆ.26ರಂದು ಎರಡು ವಿಶೇಷ ವಿಮಾನಗಳು ಕಾರ್ಯಾಚರಣೆ ನಡೆಸಲಿವೆ.
ಟಿಕೆಟ್ ಬುಕಿಂಗ್ ಕಚೇರಿಗಳು, ವೆಬ್‌ಸೈಟ್, ಕಾಲ್ ಸೆಂಟರ್ ಮತ್ತು ಅಧಿಕೃತ ಟ್ರಾವೆಲ್ ಏಜೆಂಟ್‌ಗಳ ಮೂಲಕ ಬುಕಿಂಗ್ ತೆರೆದಿರುವುದಾಗಿ ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.
ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ನಡೆಸುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಭಾರತೀಯರು ಯಾವುದೇ ವಾಣಿಜ್ಯ ವಿಮಾನ ಅಥವಾ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ಹಿಂದಿರುಗಬಹುದು ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇತ್ತೀಚಿಗೆ ಹೇಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.