ನವದೆಹಲಿ: ತಾಂತ್ರಿಕ ದೋಷದಿಂದ ಕಳೆದ ಕೆಲವು ದಿನಗಳಲ್ಲಿ ಹಲವು ಏರ್ ಇಂಡಿಯಾ ವಿಮಾನಗಳು ಪ್ರಯಾಣ ರದ್ದು ಅಥವಾ ತಡ ಮಾಡಿದ್ದು, ಪ್ರಯಾಣಿಕರಿಗೆ ತೊಂದರೆಗಿಂತ ಹೆಚ್ಚಾಗಿ ಏರ್ ಇಂಡಿಯಾ ಮೇಲಿನ ನಂಬಿಕೆ ಕಳೆದುಕೊಳ್ಳುವಂತೆ ಮಾಡಿದೆ ಎಂದು ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಏರ್ ಇಂಡಿಯಾವು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಅತಿ ಶೀಘ್ರದಲ್ಲಿ ಬಗೆಹರಿಸಬೇಕು. ಅದರ ನಿರ್ವಹಣಾ ಪ್ರೋಟೋಕಾಲ್‌ಗಳನ್ನು ತುರ್ತಾಗಿ ಹೆಚ್ಚಿಸಬೇಕು, ಹೆಚ್ಚಿನ ಸುರಕ್ಷತಾ ತಪಾಸಣೆ ಹಾಗೂ ತಾಂತ್ರಿಕ ವಿಭಾಗದ ಕುರಿತು ಗಮನನೀಡಬೇಕು ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಯಾಣಿಕರ ಸುರಕ್ಷತೆಯ ಜೊತೆ ಏರ್ ಇಂಡಿಯಾವು ರಾಜಿ ಮಾಡಿಕೊಳ್ಳಬಾರದು. ಪ್ರಯಾಣಿಕರ ಜೊತೆ ಪಾರದರ್ಶಕ ಸಂವಹನ ಮಾಡುವ ಮೂಲಕ ಅವರ ನಂಬಿಕೆಯನ್ನು ಮರಳಿ ಪಡೆಯುವ ಕೆಲಸ ಮಾಡಬೇಕಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.