ADVERTISEMENT

ಸತತ ಮೂರನೇ ದಿನವೂ ದೆಹಲಿ ಗಾಳಿಯ ಗುಣಮಟ್ಟ ‘ಕಳಪೆ’

ಪಿಟಿಐ
Published 16 ಅಕ್ಟೋಬರ್ 2025, 9:52 IST
Last Updated 16 ಅಕ್ಟೋಬರ್ 2025, 9:52 IST
   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟವು ಸತತ ಮೂರನೇ ದಿನವಾದ ಗುರುವಾರವೂ ‘ಕಳಪೆ’ ಮಟ್ಟಕ್ಕೆ ಕುಸಿದಿದೆ. ದೆಹಲಿಯಲ್ಲಿ ಬೆಳಿಗ್ಗೆ 9 ಗಂಟೆಗೆ ವಾಯು ಗುಣಮಟ್ಟದ ಸೂಚ್ಯಂಕವು (ಎಕ್ಯೂಐ) 237ರಷ್ಟಿತ್ತು ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ.

ಬುಧವಾರ ಬೆಳಿಗ್ಗೆ 210ರಷ್ಟಿದ್ದ ವಾಯು ಗುಣಮಟ್ಟದ ಸೂಚ್ಯಂಕವು, ಮಂಗಳವಾರ ಬೆಳಿಗ್ಗೆ 201ರಷ್ಟು ದಾಖಲಾಗಿತ್ತು.

ಎಕ್ಯೂಐ ಪ್ರಮಾಣ ಸೊನ್ನೆಯಿಂದ 50 ರಷ್ಟಿದ್ದರೆ ‘ಉತ್ತಮ‘ ಎಂದು, 51ರಿಂದ 100ರಷ್ಟಿದ್ದರೆ ‘ಸಮಾಧಾನಕರ’, 101 ರಿಂದ 200ರಷ್ಟಿದ್ದರೆ ‘ಸಾಧಾರಣ’, 201 ರಿಂದ 300ರಷ್ಟಿದ್ದರೆ ‘ಕಳಪೆ’ ಹಾಗೂ 301ರಿಂದ 400ರಷ್ಟಿದ್ದರೆ ‘ಅತ್ಯಂತ ಕಳಪೆ’ ಎಂದು ಹೇಳಲಾಗುತ್ತದೆ. 401ರಿಂದ 450ರಷ್ಟು ಕಂಡು ಬಂದರೆ ‘ತೀವ್ರ ಕಳಪೆ’ ಹಾಗೂ 450ಕ್ಕಿಂತ ಹೆಚ್ಚಾದರೆ ‘ತೀವ್ರಕ್ಕಿಂತಲೂ ಅಪಾಯಕಾರಿ’ ಎಂದು ಪರಿಗಣಿಸಲಾಗುತ್ತದೆ.

ADVERTISEMENT

ದೆಹಲಿಯಲ್ಲಿ ಗುರುವಾರ ಕನಿಷ್ಠ ತಾಪಮಾನ 18.1 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು. ಇದು ಈ ಋತುವಿನ ಸರಾಸರಿಗಿಂತ 1.5ರಷ್ಟು ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.