ADVERTISEMENT

ನನ್ನ ವಿರುದ್ಧದ ಆರೋಪಗಳು ಸುಳ್ಳು: ಚಿದಂಬರಂ

ಪಿಟಿಐ
Published 24 ನವೆಂಬರ್ 2018, 19:31 IST
Last Updated 24 ನವೆಂಬರ್ 2018, 19:31 IST
ಚಿದಂಬರಂ
ಚಿದಂಬರಂ   

ನವದೆಹಲಿ: ಏರ್‌ಸೆಲ್‌ ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಸಿಬಿಐ ಮಾಡಿರುವ ಆರೋಪಗಳು ಸುಳ್ಳು ಮತ್ತು ಆಧಾರಹಿತ ಎಂದು ಕಾಂಗ್ರೆಸ್‌ ಮುಖಂಡ ಪಿ. ಚಿದಂಬರಂ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಿರುವ ಸಿಬಿಐ, ‘ಅವರು ತನಿಖೆಗೆ ಸಹಕರಿಸುತ್ತಿಲ್ಲ’ ಎಂದು ಆರೋಪಿಸಿತ್ತು. ಇದಕ್ಕೆ ಪ್ರತಿಯಾಗಿ ಚಿದಂಬರಂ ಈ ಪ್ರತಿಕ್ರಿಯೆ ದಾಖಲಿಸಿದ್ದಾರೆ.

ಏರ್‌ಸೆಲ್‌ ಮ್ಯಾಕ್ಸಿಸ್ ಹಗರಣದಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ವೇಳೆ ಚಿದಂಬರಂ ಅವರು ವಿದೇಶಿ ಕಂಪನಿಗೆ 'ವಿದೇಶಿ ಹೂಡಿಕೆ ಪ್ರಚಾರ ಮಂಡಳಿ'ಯ (ಎಫ್‌ಐಪಿಬಿ) ಮಂಜೂರಾತಿ ನೀಡಿದ್ದರು ಎಂದು ಆರೋಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.