ADVERTISEMENT

ಏರ್‌ಸೆಲ್–ಮ್ಯಾಕ್ಸಿಸ್ ಪ್ರಕರಣ: ಚಿದಂಬರಂಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು

ಏಜೆನ್ಸೀಸ್
Published 5 ಸೆಪ್ಟೆಂಬರ್ 2019, 9:50 IST
Last Updated 5 ಸೆಪ್ಟೆಂಬರ್ 2019, 9:50 IST
   

ನವದೆಹಲಿ:ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂಮತ್ತು ಅವರ ಮಗ ಕಾರ್ತಿ ಚಿದಂಬರಂಗೆ ಏರ್‌ಸೆಲ್–ಮ್ಯಾಕ್ಸಿಸ್ ಪ್ರಕರಣದಲ್ಲಿ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ಷರತ್ತುಬದ್ಧನಿರೀಕ್ಷಣಾ ಜಾಮೀನು ನೀಡಿದೆ.

ಚಿದಂಬರಂ–ಕಾರ್ತಿ ಅವರ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಒ.ಪಿ.ಸೈನಿ, ‘₹ 1 ಲಕ್ಷ ಬಾಂಡ್ ಮತ್ತು ಒಬ್ಬರ ಶ್ಯೂರಿಟಿಯೊಂದಿಗೆ ಜಾಮೀನು ಪಡೆಯಬಹುದು. ಆದರೆ ತನಿಖೆಗೆ ಸಂಪೂರ್ಣ ಸಹಕರಿಸಬೇಕು’ ಎಂದು ಆದೇಶ ಪ್ರಕಟಿಸಿದ್ದಾರೆ.

ಆದರೆ,ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಪ್ರಸ್ತುತ ಈ ಪ್ರಕರಣದಲ್ಲಿ ಚಿದಂಬರಂ ಸಿಬಿಐ ವಶದಲ್ಲಿದ್ದಾರೆ.

ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿರುವ ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಚಿದಂಬರಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಗುರುವಾರ ಬೆಳಿಗ್ಗೆ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ, ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರುವುದರಿಂದ ಆರ್ಥಿಕ ಅಪರಾಧ ಪ್ರಕರಣಗಳನ್ನು ಭಿನ್ನವಾಗಿ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.