ADVERTISEMENT

ಏರ್‌ಸೆಲ್‌–ಮ್ಯಾಕ್ಸಿಸ್‌ ಹಗರಣ: ಬಂಧನ ಭೀತಿಯಿಂದ ಚಿದಂಬರಂ, ಕಾರ್ತಿ ನಿರಾಳ

ಮಧ್ಯಂತರ ರಕ್ಷಣೆ ಮೇ.30ರವರೆಗೆ ವಿಸ್ತರಣೆ

ಏಜೆನ್ಸೀಸ್
Published 6 ಮೇ 2019, 10:58 IST
Last Updated 6 ಮೇ 2019, 10:58 IST
   

ನವದೆಹಲಿ: ಏರ್‌ಸೆಲ್‌–ಮ್ಯಾಕ್ಸಿಸ್‌ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಹಣಕಾಸುಮಾಜಿ ಸಚಿವ ಪಿ.ಚಿದಂಬರಂ ಹಾಗೂ ಪುತ್ರ ಕಾರ್ತಿ ಅವರನ್ನು ಬಂಧಿಸದಂತೆ ನೀಡಿರುವ ಮಧ್ಯಂತರ ರಕ್ಷಣೆಯನ್ನು ಇಲ್ಲಿನ ವಿಶೇಷ ನ್ಯಾಯಾಲಯ ಮೇ 30ರವರೆಗೆ ಮುಂದುವರಿಸಿದೆ.

ಮಧ್ಯಂತರ ರಕ್ಷಣೆ ಕೋರಿದ್ದ ಚಿದಂಬರಂ ಪರ ವಕೀಲಎ.ಎಮ್ ಸಿಂಗ್ವಿ ಅವರ ವಾದ ಆಲಿಸಿದ ವಿಶೇಷ ನ್ಯಾಯಾಧೀಶ ಒ.ಪಿ ಸಾಯ್ನಿ ಅವರು ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದ್ದಾರೆ.

₹3500 ಕೋಟಿ ಮೊತ್ತದ ಹಗರಣ ಇದಾಗಿದೆ. ಈ ಪ್ರಕರಣವನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು. ಈ ಹಿಂದೆ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ADVERTISEMENT

2006ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ವೇಳೆ ಚಿದಂಬರಂ ಅವರು ವಿದೇಶಿ ಕಂಪನಿಗೆ 'ವಿದೇಶಿ ಹೂಡಿಕೆ ಪ್ರಚಾರ ಮಂಡಳಿ'ಯ (ಎಫ್‌ಐಪಿಬಿ) ಮಂಜೂರಾತಿ ನೀಡಿದ್ದು ಹೇಗೆ ಎಂಬ ಕುರಿತು ಸಿಬಿಐ ತನಿಖೆ ನಡೆಸಿತ್ತು. ಮ್ಯಾಕ್ಸಿಸ್‌ನ ಅಂಗಸಂಸ್ಥೆ ಮಾರಿಷಸ್ ಮೂಲದ ಗ್ಲೋಬಲ್ ಕಮ್ಯುನಿಕೇಷನ್ ಸರ್ವೀಸಸ್ ಹೋಲ್ಡಿಂಗ್ಸ್‌ಗೆ ಮಂಜೂರಾತಿ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.