ಪಿ. ಚಿದಂಬರಂ
ಕೃಪೆ: ಪಿಟಿಐ
ನವದೆಹಲಿ: ಏರ್‌ಸೆಲ್-ಮ್ಯಾಕ್ಸಿಸ್‌ಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಸರ್ಕಾರದ ಅನುಮತಿ ದೊರೆತಿದೆ.
ಅದರ ಬೆನ್ನಲ್ಲೇ ಈ ಪ್ರಕರಣದ ತ್ವರಿತ ವಿಚಾರಣೆ ಕೋರಿ ಜಾರಿ ನಿರ್ದೇಶನಾಲಯ (ಇ.ಡಿ) ವಿಶೇಷ ನ್ಯಾಯಾಲಯದ ಮೊರೆ ಹೋಗಿದೆ.
‘ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಕೋರಲಾಗಿತ್ತು. ಸರ್ಕಾರವು ಫೆಬ್ರುವರಿ 10ರಂದು ಅನುಮತಿ ನೀಡಿದೆ. ವಿಚಾರಣೆಗೆ ಅನುಮತಿ ನೀಡಿರುವ ಆದೇಶವನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ವಿಚಾರಣೆ ತ್ವರಿತಗೊಳಿಸುವಂತೆ ಕೋರಲಾಗಿದೆ’ ಎಂದು ಇ.ಡಿ ತಿಳಿಸಿದೆ.
‘ಇ.ಡಿಯ ಪ್ರಾಸಿಕ್ಯೂಷನ್ ದೂರನ್ನು ವಿಶೇಷ ನ್ಯಾಯಾಲಯವು ಈ ಹಿಂದೆಯೇ ಪರಿಗಣನೆಗೆ ತೆಗೆದುಕೊಂಡಿತ್ತು. ಆದರೆ ಕೆಲವು ರೀತಿಯ ಪ್ರಕರಣಗಳಲ್ಲಿ ಸಂಬಂಧಪಟ್ಟವರ ವಿಚಾರಣೆ ನಡೆಸಲು ಸರ್ಕಾರದ ಅನುಮತಿ ಪಡೆಯುವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದೆ. ಆದ್ದರಿಂದ ಈ ಪ್ರಕರಣದ ವಿಚಾರಣೆಯಲ್ಲಿ ವಿಳಂಬವಾಗಿದೆ’ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.