ADVERTISEMENT

ಮಹಾರಾಷ್ಟ್ರದಲ್ಲಿ ತರಬೇತಿ ವಿಮಾನ ಪತನ: ಇಬ್ಬರು ಪೈಲಟ್‌ಗಳಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಅಕ್ಟೋಬರ್ 2023, 4:30 IST
Last Updated 22 ಅಕ್ಟೋಬರ್ 2023, 4:30 IST
<div class="paragraphs"><p>ವಿಮಾನ ಪತನಗೊಂಡಿರುವ ದೃಶ್ಯ</p></div>

ವಿಮಾನ ಪತನಗೊಂಡಿರುವ ದೃಶ್ಯ

   

ನವದೆಹಲಿ: ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಳ್ಳಿಯೊಂದರ ಬಳಿ ಇಂದು (ಭಾನುವಾರ) ಬೆಳಗ್ಗೆ ಪತನಗೊಂಡಿದೆ.

ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧ ತನಿಖೆ ನಡೆಯುತ್ತಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (ಡಿಜಿಸಿಎ) ತಿಳಿಸಿದೆ.

ADVERTISEMENT

ರೆಡ್ ಬರ್ಡ್ ಅಕಾಡೆಮಿ ಟೆಕ್ನಾಮ್ ವಿಮಾನ (VT-RBT) ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.