ADVERTISEMENT

ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ಐಶ್ಚರ್ಯಾ ರೈ

ಪಿಟಿಐ
Published 19 ನವೆಂಬರ್ 2025, 11:40 IST
Last Updated 19 ನವೆಂಬರ್ 2025, 11:40 IST
<div class="paragraphs"><p>ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ಐಶ್ಚರ್ಯಾ ರೈ</p></div>

ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ಐಶ್ಚರ್ಯಾ ರೈ

   

(ಪಿಟಿಐ ಚಿತ್ರ)

ಪುಟ್ಟಪರ್ತಿ: ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ವೇಳೆ ನಟಿ, ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಿದ್ದಾರೆ.

ADVERTISEMENT

ಪು‌ಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭ‌ವು ಈ ಕ್ಷಣಕ್ಕೆ ಸಾಕ್ಷಿಯಾಯಿತು.

ಈ ಸಂಬಂಧ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ ಮಾತನಾಡಿದ ಐಶ್ವರ್ಯಾ, 'ಇಲ್ಲಿ ನಿಮ್ಮ ಉಪಸ್ಥಿತಿಯು ಶತಮಾನೋತ್ಸವ ಕಾರ್ಯಕ್ರಮಗಳಿಗೆ ಸ್ಪೂರ್ತಿಯನ್ನು ನೀಡುತ್ತದೆ' ಎಂದು ಹೇಳಿದ್ದಾರೆ.

ಸತ್ಯ ಸಾಯಿ ಬಾಲ ವಿಕಾಸದ ಮಾಜಿ ವಿದ್ಯಾರ್ಥಿನಿ ಆಗಿರುವ ಐಶ್ಚರ್ಯಾ, 'ಸತ್ಯಸಾಯಿ ಬಾಬಾ ಅವರ ಬೋಧನೆ, ಮಾರ್ಗದರ್ಶನ ಮತ್ತು ಕರುಣೆ ವಿಶ್ವದಾದ್ಯಂತ ಲಕ್ಷಾಂತರ ಜನರ ಹೃದಯಗಳಲ್ಲಿ ಪ್ರತಿಧ್ವನಿಸುತ್ತಲೇ ಇರುತ್ತದೆ' ಎಂದಿದ್ದಾರೆ.

ಈ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

ಐಶ್ಚರ್ಯಾ ರೈ ಬಚ್ಚನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.