ನವದೆಹಲಿ:ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರಿಗೆ ನೂತನ ಕೇಂದ್ರ ಸರ್ಕಾರ ಸಂಪುಟ ದರ್ಜೆ ಸ್ಥಾನ ನೀಡಿದೆ.
ರಾಷ್ಟ್ರೀಯ ಭದ್ರತಾ ವಿಚಾರವಾಗಿ ಅವರು ನೀಡಿದ ಸೇವೆಯನ್ನು ಪರಿಗಣಿಸಿ ಈ ಸ್ಥಾನ ನೀಡಲಾಗಿದೆ.
ಮುಂದಿನ ಐದು ವರ್ಷಗಳ ಅವಧಿಗೆ ಅವರನ್ನು ನೇಮಕ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಅಜಿತ್ ಡೊಭಾಲ್ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿಯೂ ಮುಂದುವರಿಯಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.