
ಮುಂಬೈ: ‘ಚುನಾವಣೆ ಬಂದಾಗಲೆಲ್ಲ ನನ್ನ ಮೇಲೆ ಆರೋಪಗಳು ಬರುತ್ತವೆ. ಇದು ರಾಜಕೀಯ ಪಿತೂರಿ’ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.
ಪುಣೆಯ ಮುಂಧ್ವಾ ಪ್ರದೇಶದಲ್ಲಿರುವ ಸುಮಾರು ₹1,800 ಕೋಟಿ ಮೌಲ್ಯದ 40 ಎಕರೆ ಜಮೀನನ್ನು ಅಜಿತ್ ಪವಾರ್ ಅವರ ಪುತ್ರ, ಪಾರ್ಥ್ ಪವಾರ್ ಒಡೆತನದ ಕಂಪನಿಯು, ಮುದ್ರಾಂಕ ಶುಲ್ಕವನ್ನು ವಂಚಿಸಿ, ಕೇವಲ ₹300 ಕೋಟಿಗೆ ಅಕ್ರಮವಾಗಿ ಖರೀದಿಸಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದು, ‘ಮಹಾ ವಿಕಾಸ್ ಅಘಾಡಿ’ ಮೈತ್ರಿಕೂಟವು ಪವಾರ್ ರಾಜೀನಾಮೆಗೆ ಒತ್ತಾಯಿಸಿದೆ.
‘ಈ ಹಿಂದೆಯೂ ₹70 ಸಾವಿರ ಕೋಟಿ ಮೊತ್ತದ ನೀರಾವರಿ ಯೋಜನೆಯ ಅಕ್ರಮದಲ್ಲಿ ನನ್ನ ಹೆಸರನ್ನು ಎಳೆದು ತರಲಾಗಿತ್ತು. ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಬೆನ್ನಲ್ಲೇ, ಈ ಆರೋಪ ಹೊರಿಸಲಾಗಿದೆ. ನಾವು ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದೇವೆ’ ಎಂದು ಪವಾರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.