ADVERTISEMENT

28 ಜನವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜನವರಿ 2026, 14:46 IST
Last Updated 28 ಜನವರಿ 2026, 14:46 IST
   

ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಅಜಿತ್ ಪವಾರ್ ಇದ್ದ ವಿಮಾನ ಪತನ: ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ

ಪುಣೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಇದೀಗ ಅವರಿದ್ದ ವಿಮಾನ ಪತನಗೊಂಡ ಭೀಕರ ದೃಶ್ಯಗಳು ಹೆದ್ದಾರಿ ಬಳಿಯಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ADVERTISEMENT

ಏರ್‌ ಇಂಡಿಯಾ ವಿಮಾನ ದುರಂತ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಕಳೆದ ವರ್ಷ(2025) ಜೂನ್ 12ರಂದು ನಡೆದ ಏರ್‌ ಇಂಡಿಯಾ ವಿಮಾನ ಅಪಘಾತ ಪ್ರಕರಣದ ತನಿಖೆಯ ಕುರಿತು ಸಲ್ಲಿಕೆಯಾದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಇಂದು (ಬುಧವಾರ) ಒಪ್ಪಿಗೆ ನೀಡಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ಆದೇಶ ಪ್ರತಿ ಹಸ್ತಾಂತರಿಸಿದ ಸಿಎಂ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿ ಅವರಿಗೆ, ರಾಜ್ಯ ಸರ್ಕಾರ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಿದೆ.

ಚೈತನ್ಯ ಬೀಳಗಿ ಅವರಿಗೆ ಸರ್ಕಾರಿ ಉದ್ಯೋಗದ ಆದೇಶ ಪ್ರತಿ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಹಾರೈಸಿದ್ದಾರೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿ ಅವರಿಗೆ, ರಾಜ್ಯ ಸರ್ಕಾರ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಿದೆ. ಚೈತನ್ಯ ಬೀಳಗಿ ಅವರಿಗೆ ಸರ್ಕಾರಿ ಉದ್ಯೋಗದ ಆದೇಶ ಪ್ರತಿ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಹಾರೈಸಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

16 ಸಾವಿರ ಉದ್ಯೋಗಿಗಳ ವಜಾಕ್ಕೆ ಅಮೆಜಾನ್‌ ನಿರ್ಧಾರ

ಇ-ಕಾಮರ್ಸ್ ವಲಯದ ಜಾಗತಿಕ ದೈತ್ಯ ಕಂಪನಿ ಅಮೆಜಾನ್, ವಿಶ್ವದಾದ್ಯಂತ 16 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ಮುಂದಾಗಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮುಕ್ತ ವ್ಯಾಪಾರ ಒಪ್ಪಂದ | ಜಾಗತಿಕ ವ್ಯಾಪಾರದಲ್ಲಿ ಭಾರತದ ಶಕೆ ಆರಂಭ: ಅಮೆರಿಕ

ಭಾರತ– ಐರೋಪ್ಯ ಒಕ್ಕೂಟದೊಟ್ಟಿಗಿನ ಮುಕ್ತ ವ್ಯಾಪಾರ ಒಪ್ಪಂದ ಅಂತಿಮಗೊಂಡಿದೆ. ಈ ಮೂಲಕ ಭಾರತವು ಜಾಗತಿಕ ವ್ಯಾಪಾರದ ವಿಷಯದಲ್ಲಿ ಮೇಲ್ಮಟ್ಟಕ್ಕೆ ಏರಿದಂತಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಆಡಳಿತದ ವ್ಯಾಪಾರ ಪ್ರತಿನಿಧಿ ಜೇಮಿಸನ್‌ ಗ್ರೀರ್‌ ಹೇಳಿದರು. 

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಇರಾನ್‌ನಲ್ಲಿ ಅಮೆರಿಕ ದಾಳಿಯ ಭೀತಿ

ಅಮೆರಿಕ ಸೇನೆಯ ದಾಳಿಯ ಸಾಧ್ಯತೆಯ ಕಾರಣಕ್ಕೆ ಇರಾನ್ ಅಧಿಕಾರಿಗಳು ಪಶ್ಚಿಮ ಏಷ್ಯಾದ ಇತರ ದೇಶಗಳನ್ನು ಬುಧವಾರ ಸಂಪರ್ಕಿಸಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಜಿತ್ ಸಾವು: ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ; ಮಮತಾ

 ಅಜಿತ್‌ ಮಾತೃ ಪಕ್ಷಕ್ಕೆ ಮರಳುವ ಯೋಜನೆಯಲ್ಲಿದ್ದರು, ಇತ್ತೀಚಿನ ದಿನಗಳಲ್ಲಿ ಹರಡಿದ್ದ ಸುದ್ದಿಗಳು ಸಹ ಈ ನಡೆಯನ್ನು ಸೂಚಿಸುವಂತೆ ಇದ್ದವು. ಈ ಸಂದರ್ಭದಲ್ಲೇ ಅವರ ಸಾವು ಸಂಭವಿಸಿರುವುದು ತೀವ್ರ ಆಘಾತ ತಂದಿದೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು. 

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಆನ್‌ಲೈನ್‌ನಲ್ಲಿ ‘ಹೇಳಿ ಹೋಗು ಕಾರಣ’ ನಕಲಿ ಪುಸ್ತಕ ಮಾರಾಟ: ಭಾವನಾ ಬೆಳಗೆರೆ ಗರಂ

ದಿ. ರವಿ ಬೆಳಗೆರೆ ಅವರು ಕನ್ನಡದ ಖ್ಯಾತ ಪತ್ರಕರ್ತ, ‘ಹಾಯ್ ಬೆಂಗಳೂರು’ ಟ್ಯಾಬ್ಲಾಯ್ಡ್ ಮತ್ತು ‘ಓ ಮನಸೇ’ ಪಾಕ್ಷಿಕದ ಸಂಪಾದಕರಾಗಿದ್ದರು. ಅವರ ಅನೇಕ ಕಾದಂಬರಿಗಳು ಇಂದಿಗೂ ಓದುಗರನ್ನು ಸೆಳೆಯುತ್ತವೆ. ಅಂತಹವುಗಳಲ್ಲಿ ಒಂದಾದ ‘ಹೇಳಿ ಹೋಗು ಕಾರಣ’ ಪ್ರೇಮ ಕಾದಂಬರಿ ಆನ್‌ಲೈನ್‌ ವೇದಿಕೆಗಳಲ್ಲಿ ಹೆಚ್ಚು ಮಾರಾಟವಾಗುತ್ತಿದ್ದು, ಪುಸ್ತಕದ ದುರ್ಬಳಕೆ ಆಗುತ್ತಿದೆ ಎಂದು ನಟಿ ಭಾವನಾ ಬೆಳಗೆರೆ ಆಕ್ರೋಶ ಹೊರ ಹಾಕಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮೀಸಲಾತಿಗಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಮತಾಂತರಗೊಳ್ಳುವ ವಂಚನೆ ಆರಂಭ: ಸುಪ್ರೀಂ

‘ಪ್ರಬಲ ಜಾತಿಯಲ್ಲಿ ಹುಟ್ಟಿದವರು ಮೀಸಲಾತಿ ಸೌಲಭ್ಯ ಪಡೆದುಕೊಳ್ಳುವುದಕ್ಕಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಮತಾಂತರಗೊಳ್ಳುವ ಹೊಸ ರೀತಿಯ ವಂಚನೆ ಆರಂಭವಾಗಿದೆ’ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಕಳವಳ ವ್ಯಕ್ತಪಡಿಸಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಐಸಿಸಿ ಟಿ20 ಕ್ರಮಾಂಕ ಪಟ್ಟಿ: ಸೂರ್ಯಕುಮಾರ್ ಏಳನೇ ಸ್ಥಾನಕ್ಕೆ

ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಬುಧವಾರ ಪ್ರಕಟವಾದ ಐಸಿಸಿ ಪುರುಷರ ಟಿ20 ರ್‍ಯಾಂಕಿಂಗ್‌ ಪಟ್ಟಿಯ ಬ್ಯಾಟರ್‌ಗಳ ವಿಭಾಗದಲ್ಲಿ ಏಳನೇ ಸ್ಥಾನಕ್ಕೆ ಏರಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಹಾಲಿ ಟಿ20 ಸರಣಿಯಲ್ಲಿ ತೋರಿದ ಉತ್ತಮ ಪ್ರದರ್ಶನದಿಂದ ಅವರು ಐದು ಸ್ಥಾನಗಳಷ್ಟು ಬಡ್ತಿ ಪಡೆದಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.