ADVERTISEMENT

ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಅನಾಹುತ

ಪಿಟಿಐ
Published 11 ಅಕ್ಟೋಬರ್ 2025, 2:26 IST
Last Updated 11 ಅಕ್ಟೋಬರ್ 2025, 2:26 IST
<div class="paragraphs"><p>ಆಕಾಶ ಏರ್ ವಿಮಾನ</p></div>

ಆಕಾಶ ಏರ್ ವಿಮಾನ

   

ನವದೆಹಲಿ: ಹಕ್ಕಿ ಡಿಕ್ಕಿಯಾದ ಪರಿಣಾಮ ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನ ದೆಹಲಿಯ ವಿಮಾನ ನಿಲ್ದಾಣಕ್ಕೆ ವಾಪಸ್ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನವನ್ನು ಎಂಜಿನಿಯರಿಂಗ್ ತಂಡವು ತಪಾಸಣೆ ನಡೆಸುತ್ತಿದ್ದು, ಪರಿಶೀಲನೆ ಬಳಿಕ ಸೇವೆಗೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ADVERTISEMENT

‘ಅಕ್ಟೋಬರ್ 10ರಂದು ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ (QP 1607) ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನವು ಸುರಕ್ಷಿತವಾಗಿ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ’ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ವಿಮಾನಯಾನ ಸಂಸ್ಥೆಯು ಪ್ರಯಾಣಿಕರ ಸಂಖ್ಯೆಯ ಬಗ್ಗೆ ವಿವರಗಳನ್ನು ಬಹಿರಂಗಪಡಿಸಿಲ್ಲ. ಆದರೆ, ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಹಕ್ಕಿ ಡಿಕ್ಕಿ ಹೊಡೆದ ವಿಮಾನವು ದೆಹಲಿಯಿಂದ ಗೋವಾಕ್ಕೆ ಹಾರಾಟ ನಡೆಸಬೇಕಿತ್ತು. ಈ ಮಾರ್ಗಕ್ಕೆ ಮತ್ತೊಂದು ವಿಮಾನವನ್ನು ನಿಯೋಜಿಸಿದ್ದರಿಂದ ಕೆಲವು ಗಂಟೆಗಳ ಕಾಲ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.