ಲಖನೌ: 2024ರ ಲೋಕಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಲೋಕಸಭಾ ಕ್ಷೇತ್ರವಾದ ರಾಯ್‌ಬರೇಲಿಯಲ್ಲಿ ಮತ್ತು 2019ರ ಚುನಾವಣೆಯಲ್ಲಿ ಸೋಲುವವರೆಗೆ ರಾಹುಲ್ ಗಾಂಧಿ ಪ್ರತಿನಿಧಿಸಿದ್ದ ಅಮೇಠಿ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸೂಚನೆಯನ್ನು ಸಮಾಜವಾದಿ ಪಕ್ಷದ (ಎಸ್.ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ನೀಡಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುವಂತೆ ರಾಯ್‌ಬರೇಲಿ ಮತ್ತು ಅಮೇಠಿ ಕ್ಷೇತ್ರಗಳ ಸ್ಥಳೀಯ ಎಸ್‌ಪಿ ಮುಖಂಡರಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ 80 ಲೋಕಸಭಾ ಕ್ಷೇತ್ರಗಳಲ್ಲೂ ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಮತ್ತು ಸಮಾಜವಾದಿ ಪಕ್ಷದ ಮೈತ್ರಿಕೂಟವು ಅಭ್ಯರ್ಥಿಗಳನ್ನು ಕಣಕ್ಕಳಿಸಲಿದೆ ಎಂದು ಸೋಮವಾರ ಉಂಚಾಹಾರ್‌ಗೆ ಭೇಟಿ ನೀಡಿದ್ದ ವೇಳೆ ಅಖಿಲೇಶ್ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.