ಸರನ್: ಉತ್ತರ ಪ್ರದೇಶದ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಬೀಹಾರದ ಸರನ್ ಜಿಲ್ಲೆಯಲ್ಲಿ ನಡೆಯಲಿರುವ ಮತದಾರರ ಅಧಿಕಾರದ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
‘ದೃಢ ಮಿತ್ರ‘ ಯಾದವ್ ದೇಶದ ಪ್ರಜಾಪ್ರಭುತ್ವವನ್ನು ನಾಶಮಾಡಲು ಬಿಜೆಪಿ ನಡೆಸುತ್ತಿರುವ ಪ್ರಯತ್ನದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇಂದು ಸರನ್‌ನಲ್ಲಿ ನಡೆಯಲಿರುವ ಮತದಾರರ ಅಧಿಕಾರದ ಯಾತ್ರೆಯಲ್ಲಿ ಅಖಿಲೇಶ್ ಯಾದವ್ ಭಾಗಿಯಾಗಲಿದ್ದಾರೆ. ಪ್ರಜಾಪ್ರಭುತ್ವವನ್ನು ರಕ್ಷಿಸುವ ಈ ಐತಿಹಾಸಿಕ ಆಂದೋಲನಕ್ಕೆ ಅವರಿಗೆ ಸ್ವಾಗತ. ಯಾದವ್ ಅವರು ಉತ್ತರ ಪ್ರದೇಶ ಸೇರಿದಂತೆ ದೇಶದಾದ್ಯಂತ ಬಡವರ ಹಾಗೂ ದೀನದಲಿತರ ಪರವಾಗಿ ಧ್ವನಿಯಾಗಿದ್ದಾರೆ ಎಂದು ಕೆ.ಸಿ.ವೇಣುಗೋಪಾಲ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ರವರು ಚರ್ಚೆ ನಡೆಸುತ್ತಿರುವ ಪೋಟೋವನ್ನು ಹಂಚಿಕೊಂಡಿದ್ದಾರೆ
ಆರ್‌ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಅವರ ಮಗಳಾದ ರೋಹಿಣಿ ಆಚಾರ್ಯ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸರನ್ ಕ್ಷೇತ್ರದಿಂದ ಸ್ಫರ್ಧಿಸಿ ಸೋಲು ಅನುಭವಿಸಿದ್ದರು. ಈ ಯಾತ್ರೆಯು ಭೋಜ್‌ಪುರ ಮತ್ತು ಪಾಟ್ನಾ ಮೂಲಕ ಸಾಗಲಿದೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.