ಸಮಾಜವವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್
ಪಿಟಿಐ ಚಿತ್ರ
ಲಖನೌ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಾಳೆ ನಡೆಯಲಿರುವ ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಅಖಿಲೇಶ್ ಯಾದವ್ ಭಾಗವಹಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ(ಎಸ್‌ಪಿ) ವಕ್ತಾರ ರಾಜೇಂದ್ರ ಚೌಧರಿ ಹೇಳಿದ್ದಾರೆ
ಪಂಚ ರಾಜ್ಯಗಳ ವಿಧಾನಸಭೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ಬೆನ್ನಲ್ಲೇ ಲೋಕಸಭಾ ಚುನಾವಣೆಯ ಸಿದ್ಥತೆ ಬಗ್ಗೆ ಚರ್ಚಿಸಲು ಮಲ್ಲಿಕಾರ್ಜುನ ಖರ್ಗೆ ಅವರು ಡಿಸೆಂಬರ್ 6ರಂದು ಮೈತ್ರಿಕೂಟದ ಸಭೆ ಕರೆದಿದ್ದಾರೆ.
‘ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವ ಕುರಿತಂತೆ ಯಾವುದೇ ಯೋಜನೆಗಳನ್ನು ಅಖಿಲೇಶ್ ಯಾದವ್ ಹೊಂದಿಲ್ಲ. ಪ್ರೊ. ರಾಮ್ ಗೋಪಾಲ್ ಯಾದವ್ ಅವರು ಭಾಗವಹಿಸುವ ಸಾಧ್ಯತೆಯಿದೆ. ಇಲ್ಲವೇ ಪಕ್ಷದ ಇತರ ನಾಯಕರು ಭಾಗವಹಿಸಬಹುದು’ ಎಂದು ಚೌಧರಿ ತಿಳಿಸಿದ್ದಾರೆ.
ಕಾಂಗ್ರೆಸ್ ಪರಾಭವದ ಬೆನ್ನಲ್ಲೇ ಬಿಜೆಪಿಯಂತಹ ದೊಡ್ಡ ಪಕ್ಷ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಸಾಕಷ್ಟು ಸಿದ್ಧತೆಗಳನ್ನು ಮಾಡಬೇಕಾಗುತ್ತದೆ ಎಂದು ಅಖಿಲೇಶ್ ಯಾದವ್ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.