ADVERTISEMENT

ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಸೋಲಿಸಲು ಒಗ್ಗಟ್ಟಾಗೋಣ ಎಂದ ಅಖಿಲೇಶ್ ಯಾದವ್

ಪಿಟಿಐ
Published 1 ಆಗಸ್ಟ್ 2021, 9:47 IST
Last Updated 1 ಆಗಸ್ಟ್ 2021, 9:47 IST
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್    

ಲಖನೌ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಣ್ಣ ರಾಜಕೀಯ ಪಕ್ಷಗಳ ಜತೆ ಮೈತ್ರಿಗೆ ಸಮಾಜವಾದಿ ಪಕ್ಷದ (ಎಸ್‌ಪಿ) ಬಾಗಿಲು ಸದಾ ತೆರೆದಿದೆ ಎಂದು ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಬಿಜೆಪಿಯನ್ನು ಸೋಲಿಸುವುದಕ್ಕಾಗಿ ಇತರ ರಾಜಕೀಯ ಪಕ್ಷಗಳು ಒಗ್ಗೂಡಬೇಕು ಎಂದೂ ಅವರು ಹೇಳಿದ್ದಾರೆ.

ಎಸ್‌ಪಿ ವಿರುದ್ಧ ನಿರಂತರ ವಾಗ್ದಾಳಿ ನಡೆಸುವ ಬಿಎಸ್‌ಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

ADVERTISEMENT

ಬಿಎಸ್‌ಪಿ ಮತ್ತು ಕಾಂಗ್ರೆಸ್‌ನ ಹೋರಾಟ ಬಿಜೆಪಿ ವಿರುದ್ಧವೇ ಅಥವಾ ಎಸ್‌ಪಿ ವಿರುದ್ಧವೇ ಎಂದು ಅಖಿಲೇಶ್ ಪ್ರಶ್ನಿಸಿದ್ದಾರೆ.

ಅನೇಕ ಸಣ್ಣ ಪಕ್ಷಗಳು ನಮ್ಮ ಜತೆ ಈಗಾಗಲೇ ಮೈತ್ರಿ ಮಾಡಿಕೊಂಡಿವೆ. ಉಳಿದ ಪಕ್ಷಗಳಿಗೂ ಸದಾ ಸ್ವಾಗತವಿದೆ. ಇನ್ನೂ ಹೆಚ್ಚಿನ ಪಕ್ಷಗಳು ನಮ್ಮ ಜತೆ ಕೈಜೋಡಿಸಲಿವೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರದ ವಿರುದ್ಧ ಆಕ್ರೋಶ: ಪೆಗಾಸಸ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್, ಎನ್‌ಡಿಎಗೆ ಲೋಕಸಭೆಯಲ್ಲಿ 350ರಷ್ಟು ಸ್ಥಾನಗಳಿವೆ. ಅನೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ. ಆದರೂ ಅವರು ಗೂಢಚರ್ಯೆ ಯಾಕೆ ನಡೆಸುತ್ತಿದ್ದಾರೆ ಮತ್ತು ಆ ಮೂಲಕ ಏನನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ? ಈ ರೀತಿ ಮಾಡುವ ಮೂಲಕ ಅವರು ವಿದೇಶಿ ಶಕ್ತಿಗಳಿಗೆ ನೆರವಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.