ADVERTISEMENT

ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2019, 12:55 IST
Last Updated 13 ಜನವರಿ 2019, 12:55 IST

ಶ್ರೀನಗರ (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಮೃತರಾಗಿದ್ದಾರೆ.

ಅಲ್‌– ಬದರ್‌ ಉಗ್ರ ಸಂಘಟನೆ ಮುಖ್ಯಸ್ಥ ಜೀನತ್‌ ಉಲ್‌– ಇಸ್ಲಾಂ ಮತ್ತು ಶಾಕೀಲ್‌ ದಾರ್‌ ಮೃತರು. ದಕ್ಷಿಣ ಕಾಶ್ಮೀರದಕಟ್ಪೊರಾ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿತು.

ಉಗ್ರರಿಗೆ ಶರಣಾಗುವ ಅವಕಾಶ ನೀಡಿದರೂ, ಅವರು ದಾಳಿ ನಡೆಸಿದ ಕಾರಣ ಭದ್ರತಾ ಪಡೆ ಪ್ರತಿದಾಳಿ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.