ಸಾಂದರ್ಭಿಕ ಚಿತ್ರ
ರಾಂಚಿ: ಭಾರತ ಉಪಖಂಡದಲ್ಲಿನ ಅಲ್–ಕೈದಾ ಉಗ್ರ ಸಂಘಟನೆಯ ಶಂಕಿತ ಸದಸ್ಯನನ್ನು ದೆಹಲಿ ಪೊಲೀಸ್ ವಿಶೇಷ ಪಡೆಯು ರಾಂಚಿಯಲ್ಲಿ ಶುಕ್ರವಾರ ಬಂಧಿಸಿದೆ.
ಬಂಧಿತನನ್ನು ಶಹಬಾಜ್ ಎಂದು ಗುರುತಿಸಲಾಗಿದೆ.
ಭಯೋತ್ಪಾದನೆ ನಿಗ್ರಹ ದಳದ (ಎಟಿಎಸ್) ಸಹಕಾರದೊಂದಿಗೆ ದೆಹಲಿ ಪೊಲೀಸರು ಈತನನ್ನು ಬಂಧಿಸಿದ್ದಾರೆ ಎಂದು ಎಂದು ಎಎನ್‌ಐ ವರದಿ ಮಾಡಿದೆ.
ಇತನ ಸಹಚರರು ಎನ್ನಲಾದ ಹಲವರನ್ನು ಪೊಲೀಸರು ಈಗಾಗಲೇ ಬಂದಿಸಿದ್ದಾರೆ. ಆದರೆ, ಶಹಬಾಜ್ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.