ADVERTISEMENT

ಅಲ್‌ ಕೈದಾ ಉಗ್ರನ ಬಂಧನ

ಪಿಟಿಐ
Published 7 ನವೆಂಬರ್ 2022, 13:16 IST
Last Updated 7 ನವೆಂಬರ್ 2022, 13:16 IST
   

ರಾಂಬನ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭಯೋತ್ಪಾದಕ ಸಂಘಟನೆ ಅಲ್ ಕೈದಾಕ್ಕೆ ಸೇರಿದ ಉಗ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಮಶಿತಾ ಹೌರಾ ನಿವಾಸಿ ಅಮೀರುದ್ದೀನ್ ಖಾನ್ ನನ್ನು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ರಾಂಬನ್ ನಲ್ಲಿ ಪೊಲೀಸ್ ತಂಡ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರನ ಬಳಿಯಿಂದ ಚೀನಾದ ಕೈಬಾಂಬ್‌ ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.