ADVERTISEMENT

ಜಮ್ಮು–ಕಾಶ್ಮೀರ: ಚುನಾವಣಾ ಆಯೋಗದತ್ತ ಎಲ್ಲರ ಚಿತ್ತ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2024, 15:58 IST
Last Updated 13 ಮಾರ್ಚ್ 2024, 15:58 IST
   

ಶ್ರೀನಗರ: ಚುನಾವಣಾ ಆಯೋಗದ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ‌, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆಗೆ ಎರಡು ದಿನಗಳ ಕಾಲ ಚರ್ಚೆ ನಡೆಸಿ ತೆರಳಿದ್ದು, ಇದೀಗ ಎಲ್ಲರ ಚಿತ್ತ ಆಯೋಗದತ್ತ ಹರಿದಿದೆ.

ಅಧಿಕಾರಿಗಳ ಜೊತೆಗಿನ ಚರ್ಚೆಯ ವೇಳೆ ಬಹುತೇಕ ರಾಜಕೀಯ ಪಕ್ಷಗಳ ನಾಯಕರು, ಲೋಕಸಭೆ ಮತ್ತು ವಿಧಾನ ಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವಂತೆ ಒತ್ತಾಯಿಸಿದ್ದರು ಎಂದು ಮೂಲಗಳು ಹೇಳಿವೆ.

ಮುಂಬರುವ ಸಾರ್ವತ್ರಿಕ ಚುನಾವಣೆಯ ಕುರಿತು ಚರ್ಚಿಸಲು ಮುಖ್ಯ ಚುನಾವಣಾಧಿಕಾರಿ ರಾಜೀವ್‌ ಕುಮಾರ್‌ ಮತ್ತು ಇತರ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರಕ್ಕೆ ಸೋಮವಾರ ತಲುಪಿದ್ದರು.

ADVERTISEMENT

ನ್ಯಾಶನಲ್‌ ಕಾನ್ಫರೆನ್ಸ್‌, ಪಿಡಿಪಿ, ಬಿಜೆಪಿ , ಕಾಂ‌ಗ್ರೆಸ್‌, ಸಿಪಿಎಂ ಮತ್ತು ಎಎಪಿ ಪ್ರತಿನಿಧಿಗಳ ಜೊತೆಗೆ ಅವರು ಚರ್ಚೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.